ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ??
Cnewstv.in / 27.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ??
ನವದೆಹಲಿ : ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ.
ರಷ್ಯಾ – ಉಕ್ರೇನ್ ಯುದ್ದದಿಂದಾಗಿ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿದ್ದು, ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆಯಾಗಿತ್ತು, ಇದೀಗ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ.
ಜಗತ್ತಿನಲ್ಲಿ ಅತಿಹೆಚ್ಚು ಅಡುಗೆ ಎಣ್ಣೆ ರಫ್ತು ಮಾಡುವ ದೇಶವಾದ ಇಂಡೋನೇಷ್ಯಾ ನಾಳೆಯಿಂದ ತಾಳೆ ಎಣ್ಣೆ ರಫ್ತು ನ್ನು ತನ್ನ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ. ಇಂಡೋನೇಷ್ಯಾದಲ್ಲೇ ತಾಳೆ ಎಣ್ಣೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಅಲ್ಲಿನ ಅಧ್ಯಕ್ಷ ಜೊಕೊ ಜೊಕೊಯ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಭಾರತದ ಕೂಡ ಅತಿ ಹೆಚ್ಚಿನ ಪ್ರಮಾಣದಲ್ಲಿ ಇಂಡೋನೇಶಿಯಾದಿಂದ ತಾಳೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು. ತಾಳೆ ಎಣ್ಣೆ ಆಮದು ಮಾಡಿಕೊಳ್ಳುವುದು ರದ್ದಾದ ಹಿನ್ನೆಲೆಯಲ್ಲಿ ದೇಶದಲ್ಲಿ ಅಡುಗೆ ಎಣ್ಣೆ ಬೆಲೆ ಶೇ.10 ರಿಂದ 15 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನು ಒದಿ : https://cnewstv.in/?p=9579
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ?? 2022-04-27
Recent Comments