ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು – ಡಿಕೆ ಶಿವಕುಮಾರ್.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು – ಡಿಕೆ ಶಿವಕುಮಾರ್.
ಬೆಂಗಳೂರು : ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ರಾಜ್ಯ ಕಾಂಗ್ರೆಸ್ ಬರೋಬ್ಬರಿ 78 ಲಕ್ಷ ಸದಸ್ಯರನ್ನು ಹೊಂದಿದ್ದು, ದೇಶದಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನ ಪಡೆದಿದೆ ಎಂದರು.
ನೋಂದಣಿದಾರರೂ ಮೂನಾಲ್ಕು ದಿನದಲ್ಲಿ ಸದಸ್ಯತ್ವ ನೋಂದಣಿ ಶುಲ್ಕ 5 ರೂಪಾಯಿ ನೀಡಬೇಕು. ಸ್ಮಾರ್ಟ್ ಕಾರ್ಡ್ ಬೇಕಾದರೆ 10 ರೂಪಾಯಿ ಶುಲ್ಕವನ್ನು ಕೆಪಿಸಿಸಿ ಕಚೇರಿಗೆ ರವಾನಿಸಬೇಕು ಎಂದರು. ಸದಸ್ಯತ್ವ ಪಡೆದ ಮತದಾರರ ಪಟ್ಟಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪ್ರಕಟಿಸಲಾಗುವುದು.
ಸದಸ್ಯತ್ವ ವಿಚಾರವಾಗಿ ಅಹವಾಲು ಅಥವಾ ದೂರುಗಳಿದ್ದರೆ ಅದನ್ನು ಸಲ್ಲಿಸಲು 15 ದಿನಗಳ ಕಾಲ ಕಾಲಾವಕಾಶ ನೀಡಲಾಗುತ್ತದೆ. ಜಿಲ್ಲಾ ಮಟ್ಟದ ಸಮಿತಿಯನ್ನು ರಚನೆ ಮಾಡಿ ಅದರ ಮೂಲಕ ದೂರುಗಳನ್ನು ಸ್ವೀಕರಿಸುತ್ತೇವೆ. ನಂತರ ಅಂತಿಮ ಪಟ್ಟಿಯನ್ನು ಪ್ರಕಟಿಸುತ್ತೇವೆ ಎಂದರು.
ಇದನ್ನು ಒದಿ : https://cnewstv.in/?p=9583
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು - ಡಿಕೆ ಶಿವಕುಮಾರ್. 2022-04-27