Breaking News

ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ.

Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ.

ನವದೆಹಲಿ : ಭಾರತದಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಾಲಕ್ಕನೇ ಅಲೆಯ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಇಂದು ಸಭೆ ನಡೆಸಿದರು.

ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಉತ್ತಮವಾಗಿ ನಿರ್ವಹಿಸುತ್ತಿದ್ದೇವೆ ಆದರೂ ಕೊರೊನಾ ಭಯ ನಮ್ಮಿಂದ ಇನ್ನು ಸಂಪೂರ್ಣವಾಗಿ ಹೋಗಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು ತೆಗೆದುಕೊಳ್ಳಬೇಕು.

ದೇಶದಲ್ಲಿ ಶೇ. 96ರಷ್ಟು ಜನರು ಕೋವಿಡ್ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಶೇಕಡ 85 ರಷ್ಟು ಜನ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.‌ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು. ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಮಾನವ ಶಕ್ತಿಯನ್ನು ಹೆಚ್ಚಿಸಬೇಕು ಎಂದರು.

ಇದನ್ನು ಒದಿ‌ : https://cnewstv.in/?p=9585

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*