Breaking News

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ.

Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ.

ಬೆಂಗಳೂರು : ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಇಲಾಖೆಯ ವರದಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 126 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,713ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 99 ಮಂದಿ‌ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದರೊಂದಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 39,05,397 ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 114 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,195 ಕ್ಕೆ ಏರಿಕೆಯಾಗಿದೆ.

ಇಂದಿನ ಪಾಸಿಟಿವಿಟಿ ದರ 1.16 ಗೆ ಏರಿಕೆಯಾಗಿದೆ. ಕೊರೊನಾದಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 40057.

ಇದನ್ನು ಒದಿ‌ : https://cnewstv.in/?p=9588

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*