ಸಾಂದರ್ಭಿಕ ಚಿತ್ರ
ಭದ್ರಾ ನಾಲೆಗಳಿಗೆ ನೀರು ಬಂದ್. ಜಲಾಶಯದ ನೀರಿನ ಪ್ರಮಾಣವೆಷ್ಟು ಗೊತ್ತಾ ?
Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್.
ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ 80 ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ನೀರಾ ಸಲಹಾ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಎಲ್ಲ ರೈತರ ಹಿತದೃಷಿಯಿಂದ ಭದ್ರಾ ಜಲಾಶಯದ ಬೇಸಿಗೆ ಬೆಳೆಗಳಿಗೆ ಹರಿಸುತ್ತಿದ್ದ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುತ್ತಿದೆ. ಹಾಗೂ ನೀರಿನ ಅವಶ್ಯಕತೆಗನುಗುಣವಾಗಿ ಮೇ 20 ರವರೆಗೆ ನೀರನ್ನು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದೆ.
ನಾನು ಪ್ರಾಧಿಕಾರದ ಅಧ್ಯಕ್ಷೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀನಿ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಕೆಲಸ ಮಾಡಿಸಿದ್ದೇನೆ. ನಾವು ಕೇವಲ ಅಧಿಕಾರಿಗಳ ಮೇಲೆ ಅವಲಂಬಿತರಾಗದೇ ಕೆಲಸ ಮಾಡಬೇಕು. ಹಿಂದೆ ಬರ ಇಲ್ಲದಿದ್ದ ಸಮಯದಲ್ಲೂ ಸಹ ಕಡೆಯ ಭಾಗಕ್ಕೆ ನೀರು ಸಿಕ್ಕಿರಲಿಲ್ಲ. ಆದರೆ ಕಾಳಜಿ ಮತ್ತು ಜವಾಬ್ದಾರಿ ವಹಿಸಿದಲ್ಲಿ ಎಲ್ಲರಿಗೆ ನ್ಯಾಯ ಒದಗಿಸಬಹುದು. ಜೊತೆಗೆ ಅಧಿಕಾರಿಗಳು ಸರಿ ಹೋಗ್ತಾರೆ.
ಕಳೆದ ಬಾರಿ ಹಾಗೂ ಈ ಬಾರಿ ಎರಡೂ ಸಲ ಜಲಾಶಯದಲ್ಲಿ ನೀರು ಉಳಿಕೆ ಮಾಡಿದ್ದೇವೆ. ಅನಾವಶ್ಯಕವಾಗಿ ಹರಿಯುತ್ತಿದ್ದ ನೀರನ್ನು ವಾಣಿವಿಲಾಸ ಜಲಾಶಯಕ್ಕೆ ಹರಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಯ ಡಿಪಿಆರ್ ನಲ್ಲಿ ಬದಲಾವಣೆ ಆಗಬೇಕು. ಶಾಸಕರು ಸಹ ಈ ಬಗ್ಗೆ ಇಚ್ಚಾಶಕ್ತಿ ತೋರಬೇಕೆಂದರು.
ಸದಸ್ಯರಾದ ತೇಜಸ್ವಿ ಪಟೇಲ್, ವೈ.ಸಿ.ಮಲ್ಲಿಕಾರ್ಜುನ, ರುದ್ರಮೂರ್ತಿ, ಮಂಜುನಾಥ್ ರೆಡ್ಡಿ, ಮಹೇಶ್ ಇತರೆ ಸದಸ್ಯರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು, ರೈತ ಮುಖಂಡರು ಮಾತನಾಡಿ. ಸಲಹೆ ಸೂಚನೆಗಳನ್ನು ನೀಡಿದರು.
ಭದ್ರಾ ಜಲಾಶಯದ ನೀರಿನ ಪ್ರಮಾಣ :
ದಿ: 27.04.2022 ರಂದು ಹಾಲಿ ಬಳಕೆಗೆ ಬರುವ ನೀರಿನ ಪ್ರಮಾಣ 25.894 ಟಿಎಂಸಿ. 2021-22 ನೇ ಸಾಲಿನ ಬೇಸಿಗೆ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ಹರಿಸಲು ಬೇಕಾಗಬಹುದಾದ ಸರಾಸರಿ ನೀರಿನ ಪ್ರಮಾಣ 6.20 ಟಿಂಎಂಸಿ. ಒಟ್ಟು ಬಳಕೆಯಾಗುವ ನೀರಿನ ಪ್ರಮಾಣ 17.24 ಟಿಂಎಂಸಿ. ಭದ್ರಾ ಜಲಾಶಯದಲ್ಲಿ ಉಳಿಯಬಹುದಾದ ನೀರಿನ ಪ್ರಮಾಣ 8.65 ಟಿಎಂಸಿ.
ಸಭೆಯಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸದಸ್ಯರು, ರೈತ ಮುಖಂಡರು, ಆಡಳಿತಾಧಿಕಾರಿ ಅರುಣ್, ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಇದನ್ನು ಒದಿ : https://cnewstv.in/?p=9603
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಭದ್ರಾ ಜಲಾಶಯದ ನೀರಿನ ಪ್ರಮಾಣ : 2022-04-28