Breaking News

ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ.

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ.

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಹಾಗೂ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪನವರು, ರಾಜ್ಯದ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.‌ ಹಿಂದು-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಲ್ಲರೂ ಕೂಡ ಸಹಕಾರ ನೀಡಬೇಕು ಎಂದರು.

ಇನ್ನು ಈ ಬಾರಿ ಬರುವಂತಹ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ. ಪ್ರಧಾನಿಯವರ ಒಳ್ಳೆಯ ಕೆಲಸದಿಂದ ಪ್ರತಿಯೊಂದು ಕುಟುಂಬಕ್ಕೂ ಒಂದಲ್ಲ ಒಂದು ಸೌಲಭ್ಯ ಸಿಕ್ಕಿದೆ.. 150 ಸೀಟು ಗೆಲ್ಲಲು ನಾವು ಶಕ್ತಿಮೀರಿ ಪ್ರಯತ್ನ ಮಾಡುತ್ತೇವೆ ಎಂದರು. ಪಕ್ಷದ ಸಂಘಟನೆಯ ಬಲಪಡಿಸಿ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇದೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಬಾರಿ ಭದ್ರಾವತಿ ಗೆಲ್ಲಲು ವಿಶೇಷ ಪ್ರಯತ್ನ ಮಾಡುತ್ತೇವೆ. ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನ ಗೆಲ್ಲುತ್ತೇವೆ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದರು.

ಇದನ್ನು ಒದಿ‌ : https://cnewstv.in/?p=9628

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*