ಬಸವ ಜಯಂತಿಯ ಶುಭಾಶಯಗಳು
Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಸವ ಜಯಂತಿಯ ಶುಭಾಶಯಗಳು
Cnewstv in ಎಲ್ಲಾ ವೀಕ್ಷಕರಿಗೆ ಬಸವ ಜಯಂತಿಯ ಶುಭಾಶಯಗಳು..
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ
ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ, ಪ್ರಥಮ ಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿಯೆನ್ನ ನಿರಿಸಿಕೊಂಡಿರ್ದಿರಯ್ಯಾ, ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿಸಿಕೊಂಡಿರ್ದಿರಯ್ಯಾ, ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಲೀಲಾ ವಿನೋದದಿಂದಿರಿಸಿಕೊಂಡಿರ್ದಿರಯ್ಯಾ, ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಮನಃ ಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ಸರ್ವಕಾಲ ಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಶ್ಹಭನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮೊಕ್ಕುದಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ.
ಇದನ್ನು ಒದಿ : https://cnewstv.in/?p=9660
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಬಸವ ಜಯಂತಿಯ ಶುಭಾಶಯಗಳು 2022-05-03