ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು.
Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Cnewstv in ಎಲ್ಲಾ ವೀಕ್ಷಕರಿಗೆ ಪವಿತ್ರ ರಂಜಾನ್ ಶುಭಾಶಯಗಳು.
ಶಿವಮೊಗ್ಗ : ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಮದಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿತು. ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು. ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕಾಮಾಸಕ್ತಿಯ ಚಟುವಟಿಕೆಗಳನ್ನು ತ್ಯಜಿಸುವುದನ್ನೇ ಇಸ್ಲಾಮಿನಲ್ಲಿ ಉಪವಾಸ ಅಥವಾ ವ್ರತಾಚರಣೆ ಎನ್ನಲಾಗಿದೆ. ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ.
ಇಸ್ಲಾಂ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ಧಾರ್ಮಿಕವಾಗಿ ಈದ್-ಉಲ್-ಫಿತರ್ ಎಂತಲೂ ಕರೆಯುತ್ತಾರೆ.
ಇದನ್ನು ಒದಿ : https://cnewstv.in/?p=9663
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಪವಿತ್ರ ರಂಜಾನ್ ಶುಭಾಶಯಗಳು. 2022-05-03