ಡಾ. ಸಿ.ಎನ್. ಅಶ್ವತ್ಥನಾರಾಯಣ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ – ಶಿವಮೊಗ್ಗ ಜಿಲ್ಲಾ NSUI
Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಡಾ. ಸಿ.ಎನ್. ಅಶ್ವತ್ಥನಾರಾಯಣ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ – ಶಿವಮೊಗ್ಗ ಜಿಲ್ಲಾ NSUI
ಶಿವಮೊಗ್ಗ : ಪಿಎಸ್‍ಐ ಹುದ್ದೆಗಳ ನೇಮಕದ ಅಕ್ರಮದಲ್ಲಿ ಭಾಗಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ NSUI ವತಿಯಿಂದ ಆಗ್ರಹಿಸಲಾಯಿತು.
ರಾಜ್ಯ ಸರ್ಕಾರ ನಡೆಸಿದ 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಬೆಳಕಿಗೆ ಬಂದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವರ ಸಂಬಂಧಿಯೂ ಭಾಗಿಯಾಗಿದ್ದು, ಕೂಡಲೇ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಒಂದಿಲ್ಲೊಂದು ಹಗರಣಗಳು ನಡೆಯುತ್ತಲೇ ಇವೆ. ಇದರ ಸಾಲಿಗೆ ಪಿಎಸ್‍ಐ ಹುದ್ದೆಗಳ ನೇಮಕಾತಿಯೂ ಸೇರ್ಪಡೆಯಾಗಿದೆ. 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಕೋಟ್ಯಂತರ ರೂ.ಗಳ ಭ್ರಷ್ಟಾಚಾರ ನಡೆದಿದ್ದು ಬೆಳಕಿಗೆ ಬಂದಿದೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವರ ಹೆಸರೂ ಸೇರಿದ್ದು ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದೇವೆ.
ಪಿಎಸ್‍ಐ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಇನ್ನಷ್ಟು ಬಿಜೆಪಿ ನಾಯಕರ ಕೈವಾಡವಿದ್ದು, ಅದನ್ನು ಮುಚ್ಚಿಕೊಳ್ಳಲು ಸರ್ಕಾರ ಮರುಪರೀಕ್ಷೆ ನಡೆಸಲು ಮುಂದಾಗಿದೆ. ಬಿಜೆಪಿ ನಾಯಕರ ತಪ್ಪುಗಳನ್ನು ಮುಚ್ಚಿಕೊಳ್ಳಲು ಮರುಪರೀಕ್ಷೆ ನಡೆಸುವ ಮೂಲಕ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾದವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಇದನ್ನೇ ನಂಬಿಕೊಂಡ ಎಷ್ಟೋ ಉದ್ಯೋಗಾಕಾಂಕ್ಷಿಗಳು ಈಗಾಗಲೇ ಆತ್ಮಸ್ಥೈರ್ಯ ಕಳೆದುಕೊಂಡಿದ್ದು ಸರ್ಕಾರ ಅವರ ಜೀವನದ ಜೊತೆ ಚೆಲ್ಲಾಟವಾಡುವುದು ಸರಿಯಲ್ಲ.
ಹಗರಣದ ತನಿಖೆ ನಡೆಸಿ ಪರೀಕ್ಷಾ ನೇಮಕಾತಿಯಲ್ಲಿ ಅಕ್ರಮವೆಸಗಿದವರ ಮೇಲೆ ಕ್ರಮ ಕೈಗೊಳ್ಳುವ ಬದಲು ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವುದು ಎಷ್ಟರಮಟ್ಟಿಗೆ ಸರಿ? ಕೂಡಲೇ ಸರ್ಕಾರ ಮರುಪರೀಕ್ಷೆ ಮಾಡುವ ನಿರ್ಧಾರವನ್ನು ಕೈಬಿಡಬೇಕು. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಿ, ಪ್ರಾಮಾಣಿಕರನ್ನು ನೇಮಕ ಮಾಡಿಕೊಳ್ಳಬೇಕು.
ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಬಹುದೊಡ್ಡ ಹಗರಣವಾಗಿದ್ದು, ಇದರಲ್ಲಿ ಇನ್ನಷ್ಟು ಬಿಜೆಪಿ ನಾಯಕರ ಮುಖವಾಡ ಕಳಚಿ ಬೀಳಲಿದೆ. ಆದ್ದರಿಂದ ಕೂಡಲೇ ಈ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಮರುಪರೀಕ್ಷೆ ಕೈಬಿಡಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದು, ನ್ಯಾಯಾಂಗ ತನಿಖೆಗೆ ಒಳಪಡಿಸದಿದ್ದಲ್ಲಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ NSUIಜಿಲ್ಲಾಧ್ಯಕ್ಷ ವಿಜಯ್ ,ರವಿ ಕಾಟಿಕೆರೆ ,ನಗರ ಅಧ್ಯಕ್ಷ ಚರಣ್ ,ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ ,ಕಾಂಗ್ರೆಸ್ ಮುಖಂಡರಾದ ಜಿ ಡಿ ಮಂಜುನಾಥ್, ಜಗದೀಶ್, ಪೂರ್ಣೇಶ್ ,ಅಲ್ಪಸಂಖ್ಯಾತ ಕಾಂಗ್ರೆಸ್ ನಗರಾಧ್ಯಕ್ಷರಾದ ಮೊಹಮ್ಮದ್ ನಿಯಾಲ್ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ,ಯುವ ಕಾಂಗ್ರೆಸ್ ನ ಮಧುಸೂದನ್, ಕರುಣಾಕರ್, ಗಿರೀಶ್, ಮಲವಗೊಪ್ಪ ಶಿವು,ಅಬ್ದುಲ್ ಸತ್ತಾರ್ ,NSUIನ ರವಿ, ಸಂಜಯ್, ಚಂದ್ರೋಜಿ ರಾವ್ ,ತೌಫಿಕ್ ,ಸಾಗರ್, ಮಂಜು , ಕಿರಣ ,ಸಾಗರ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡು ಅಶ್ವತ್ಥ್ ನಾರಾಯಣ ಅವರನ್ನು ವಜಾಗೊಳಿಸಲು ಆಗ್ರಹಿಸಿದರು
ಇದನ್ನು ಒದಿ : https://cnewstv.in/?p=9686
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
2022-05-05
Recent Comments