Breaking News

ಹಾಸ್ಯನಟ ಮೋಹನ್ ಜುನೇಜಾ ಅನಾರೋಗ್ಯದಿಂದ ನಿಧನ.

Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹಾಸ್ಯನಟ ಮೋಹನ್ ಜುನೇಜಾ ಅನಾರೋಗ್ಯದಿಂದ ನಿಧನ.

ಬೆಂಗಳೂರು : ಸ್ಯಾಂಡ್ ವುಡ್‌ ನಾ ಖ್ಯಾತ ಹಾಸ್ಯ ನಟ ಮೋಹನ್ ಜುನೇಜಾ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಟ ಮೋಹನ್ ಜುನೇಜಾ ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.‌

150 ಕ್ಕೂ ಹೆಚ್ಚು ಸಿನಿಮಾದಲ್ಲಿ ಹಾಸ್ಯ ನಟನಾಗಿ ನಟಿಸಿದ್ದಾರೆ. ಇತ್ತೀಚೆಗೆ ತೆರೆ ಕಂಡ ಕೆಜಿಎಫ್ ಸಿನಿಮಾ ಸೇರಿದಂತೆ ಅನೇಕ ಹಿರಿಯ ಕಲಾವಿದರೊಂದಿಗೆ ಅಭಿನಯಿಸಿದ್ದಾರೆ. ಮೋಹನ್ ಜುನೇಜಾ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಇದನ್ನು ಒದಿ‌ : https://cnewstv.in/?p=9706

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*