Breaking News

ಸಿದ್ದಯ್ಯ ಸರ್ಕಲ್ ಕನ್ಸರ್ವೆನ್ಸಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.

Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿದ್ದಯ್ಯ ಸರ್ಕಲ್ ಕನ್ಸರ್ವೆನ್ಸಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.

ಶಿವಮೊಗ್ಗ : ಮೇ 08 ರಂದು ಮಧಾಹ್ನ ಸಿದ್ದಯ್ಯ ಸರ್ಕಲ್ ಬಳಿಯ ಕನ್ಸರ್ವೆನ್ಸಿ ರಸ್ತೆಯಲ್ಲಿ ತೀರಾ ಸುಸ್ತಾದಂತೆ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದಾಗ, ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಮೃತನು 05 ಅಡಿ 08 ಇಂಚು ಎತ್ತರ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 01 ಇಂಚು ಕಪ್ಪು ಕೂದಲು, ಸುಮಾರು 01 ಇಂಚು ಉದ್ದದ ಕಪ್ಪು ಬಣ್ಣದ ಗಡ್ಡ, ಕುರುಚಲು ಗಡ್ಡ, ಮೀಸೆ ಬಿಟ್ಟಿರುತ್ತಾನೆ. ಮೇತನ ಬಲಗೈನ ಮುಂಗೈನ ಒಳಭಾಗದಲ್ಲಿ ಕನ್ನಡದಲ್ಲಿ ‘ಹೇಮ’ ಎಂಬ ಹಚ್ಚೆ ಗುರುತು ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.

ಇದನ್ನು ಒದಿ‌ : https://cnewstv.in/?p=9760

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*