ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ.
Cnewstv.in / 12.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ.
ಬೆಂಗಳೂರು : ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಹೆಚ್ಚಿಸಲಾಗಿದೆ.
ಎನ್ಐಎ ತಂಡ ಸಲ್ಲಿಸಿದ ಮನವಿಯಗೆ ನ್ಯಾಯಾಲಯವು ಅನುಮತಿಯನ್ನು ನೀಡಿದ್ದು, ಈ ಪ್ರಕರಣದಲ್ಲಿ ಬಂಧಿತರಾದ ಹತ್ತು ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಲಾಗಿದೆ.
ಎನ್ಐಎ ಪರ ವಕೀಲರು ಸಲ್ಲಿಸಿದ ಮನವಿ ನ ಪ್ರಕಾರ ಈಗಾಗಲೇ ಆರೋಪಿಗಳ ಗುರುತು ಪತ್ತೆಯ ಪೆರೇಡ್ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೆ ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ. ಆರೋಪಿಗಳು ಬಳಸುತ್ತಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಸಿಡಿಅರ್ ವಿಶ್ಲೇಷಣೆ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ನಡೆಯಬೇಕಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967 ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಬೇಕು ಎಂದು ಕೋರಿದರು. ನ್ಯಾಯಾಧೀಶರು ಈ ಕೋರಿಕೆಯನ್ನು ಮಾನ್ಯ ಮಾಡಿ 180 ದಿನಗಳಿಗೆ ನ್ಯಾಯಾಂಗ ಬಂಧನದ ಅವಧಿಯನ್ನು ಹೆಚ್ಚಳ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=9788
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ. 2022-05-12
Recent Comments