Breaking News

ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ..

Cnewstv.in / 12.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ..

ಶಿವಮೊಗ್ಗ : ಭದ್ರಾ ನಾಲೆ ಈಜಲು ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ.

ನೀರಿನಲ್ಲಿ ನಾಪತ್ತೆಯಾದ ಮಕ್ಕಳೆಲ್ಲ ಹರ್ಷ (10) ಹಾಗೂ ಚಂದನ (14) ಎಂದು ಗುರುತಿಸಲಾಗಿತ್ತು. ಇವರು ಬೇಸಿಗೆ ರಜೆ ಗೆಂದು ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಗ್ರಾಮದ ದೊಡ್ಡಪ್ಪನ ಮನೆಗೆ ಬಂದಿದ್ದರು. ನೆನ್ನೆ ಮಧ್ಯಾಹ್ನ ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದರು. ಆದರೆ‌ ನೆನ್ನೆ ಮಕ್ಕಳ ಯಾವ ಗುರುತು ಸಹ ಪತ್ತೆಯಾಗಿಲ್ಲ. ಇಂದು ಬೆಳಿಗ್ಗೆನಿಂದಲೇ ಮತ್ತೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನು ಒದಿ : https://cnewstv.in/?p=9790

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*