Jobs : ಕರ್ನಾಟಕ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ..
Cnewstv.in / 12.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Jobs : ಕರ್ನಾಟಕ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ..
ಬೆಂಗಳೂರು : Karnataka Bank Recruitment 2022: ಭಾರತದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ
ಸಲ್ಲಿಸಬಹುದು. ಅಭ್ಯರ್ಥಿಗಳು
ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ
ಸಲ್ಲಿಸಿ.
ಕರ್ನಾಟಕ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ 60 ಶೇಕಡಾ ಅಂಕದೊಂದಿಗೆ ಪದವಿಯನ್ನು ಪೂರ್ಣಗೊಳಿಸಬೇಕು.
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21.05.2022.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂಪಾಯಿ. ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 700 ರೂಪಾಯಿ..
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಸಲ್ಲಿಸಲು ಲಿಂಕ್ ಬಳಸಿ…
https://karnatakabank.com/careers
ಇದನ್ನು ಒದಿ : https://cnewstv.in/?p=9800
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Jobs : ಕರ್ನಾಟಕ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.. 2022-05-12