Breaking News

ದೆಹಲಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ 27 ಮಂದಿ ಸಜೀವ ದಹನ..

Cnewstv.in / 14.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೆಹಲಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ 27 ಮಂದಿ ಸಜೀವ ದಹನ..

ನವದೆಹಲಿ : ದೆಹಲಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 27 ಮಂದಿ ಸಜೀವ ದಹನವಾಗಿದ್ದಾರೆ.

ನೆನ್ನೆ ಮಧ್ಯಾಹ್ನ 4.45 ರ ಸುಮಾರಿಗೆ ದೆಹಲಿಯ ಮುಂಡ್ಕಾದಲ್ಲಿನ ಮೂರಂತಸ್ಥಿನ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ರಕ್ಷಣಾ ಸಿಬ್ಬಂದಿಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸಲಾಗಿದೆ.

ಈ ವಾಣಿಜ್ಯ ಕಟ್ಟಡದಲ್ಲಿ ಅನೇಕ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದವು. ಮೊದಲ ಮಹಡಿಯಲ್ಲಿ ಇದ್ದ ಸಿಸಿಟಿವಿ ತಯಾರಕ ಕಂಪೆನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅನೇಕ ಮಂದಿ ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ರಕ್ಷಣಾ ಸಿಬ್ಬಂದಿಗಳು 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ರಕ್ಷಣೆ ಮಾಡಿದ್ದಾರೆ. ಆದರೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಪೊಲೀಸರು ಕಟ್ಟಡ ಮಾಲಿಕನನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮೋದಿ, ರಾಮನಾಥ್ ಕೋವಿಂದ್ ತೀವ್ರ ಸಂತಾಪವನ್ನು ಸೂಚಿಸುತ್ತಾರೆ. ದೆಹಲಿ ಸರ್ಕಾರ ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರುಪಾಯಿ ಪರಿಹಾರ ನೀಡುವುದಾಗಿ ತಿಳಿಸಿದೆ.‌

ಇದನ್ನು ಒದಿ : https://cnewstv.in/?p=9810

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*