Breaking News

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ರೆಡ್ ಅಲರ್ಟ್..

Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ರೆಡ್ ಅಲರ್ಟ್..

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ..

ಅರಬ್ಬೀ ಸಮುದ್ರದಿಂದ ಪಶ್ಚಿಮ ಕರಾವಳಿಗೆ ತೇವಾಂಶ ತುಂಬಿದ ಗಾಳಿಯು ವೇಗವಾಗಿ ಬೀಸುತ್ತಿರುವುದು ರಾಜ್ಯದಲ್ಲಿ 4 ರಿಂದ 5 ದಿನಗಳಲ್ಲಿ ಬಾರಿ ಮಳೆಯಾಗಲಿದೆ.

ಮೇ 17 ಮತ್ತು 19ರಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.‌ ಮೇ 18ರಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆ ಯಾಗಲಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಹಾಗೂ ಒಂದೆರಡು ವೇಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=9841

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*