Breaking News

ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ..

Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ..

ಬೆಂಗಳೂರು : ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಕಮಲ್ ಪಂತ್ ವರ್ಗಾವಣೆ ಸುದ್ದಿ ಕೇಳಿಬರುತ್ತಿತ್ತು ಇಂದು ಅದಕ್ಕೆ ಬ್ರೇಕ್ ಬಿದ್ದಿದೆ. ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿ ಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿದ್ದ ಸಿ.ಹೆಚ್ ಪ್ರತಾಪರೆಡ್ಡಿಯವರನ್ನು ನೇಮಕಮಾಡಲಾಗಿದೆ.

1991 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಹಾಸನದ ಅರಸೀಕೆರೆ ಉಪ ವಿಭಾಗದ ಸಹಾಯಕ ಪೊಲೀಸ್‌ ಅಧಿಕಾರಿ ಆಗಿ ವೃತ್ತಿ ಜೀವನ ಆರಂಭಿಸಿದ ಅವರು, ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು. ಪ್ರತಾಪ್ ರೆಡ್ಡಿಯವರು ನಿನ್ನ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಕಮಲ್ ಪಂತ್ ಸೇರಿದಂತೆ ಐವರು IPS ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ ಮಾಡಿದ್ದು, ಕೆ ಎಸ್ ಆರ್ ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿ ವರ್ಗ ಮಾಡಲಾಗಿದೆ. ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿ ಎಡಿಜಿಪಿ ಆಗಿ ನೇಮಿಸಲಾಗಿದೆ. ಎಂ. ಎನ್. ಅನುಚೇತ್ ಅವರನ್ನು ಸಿಐಡಿ ಎಸ್ ಪಿ ಯನ್ನಾಗಿ ವರ್ಗಾಯಿಸಲಾಗಿದೆ. ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿಯಾಗಿ ವೆಂಕಟೇಶ್ ವರ್ಗಾವಣೆಯಾಗಿದ್ದಾರೆ.

ಇದನ್ನು ಒದಿ : https://cnewstv.in/?p=9845

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*