ಬೆಳ್ಳೂರು ಗ್ರಾ.ಪಂ ಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.
Cnewstv.in / 17.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಳ್ಳೂರು ಗ್ರಾ.ಪಂ ಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.
ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಎಂಬ ಹೊಸ ಪರಕಲ್ಪನೆಯೊಂದಿಗೆ ಪ್ರತಿ 3ನೇ ಶನಿವಾರದಂದು ಗ್ರಾಮ ಭೇಟಿ ನೀಡಿ ವಾಸ್ತವ್ಯ ಹೂಡುವ ಬಗೆಗಿನ ಸರ್ಕಾರದ ನಿರ್ದೇಶನದಂತೆ ಮೇ 21 ರಂದು ಬೆಳಿಗ್ಗೆ 11 ಗಂಟೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯ್ತಿಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ, ಕುಂದುಕೊರತೆ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮಾಡುವರು.
ಈ ಭಾಗದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲು ಹಾಗೂ ಮೇ 21 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=9848
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಬೆಳ್ಳೂರು ಗ್ರಾ.ಪಂ ಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ. 2022-05-17