ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ..
Cnewstv.in / 19.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ..
ಬೆಂಗಳೂರು : 2021-22 ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಲಿದ್ದಾರೆ.
ಈ ವರ್ಷ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‍ಸೈಟ್ //kseeb.kar.nic.in, //sslc.karnataka.gov.in, //karresults.nic.in ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಲಭ್ಯವಾಗಲಿದೆ.
ಇದನ್ನು ಒದಿ : https://cnewstv.in/?p=9868
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ.. 2022-05-19
Recent Comments