ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ
ಶಿವಮೊಗ್ಗ : ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.
ಮಳೆ ನೀರು ಇಳಿಕೆಯಾದ ತಕ್ಷಣ ಅಂತಹ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮನವಿ ಮಾಡಿದ್ದಾರೆ.
ಮಳೆಯ ನೀರು ನಿಂತಿರುವ ಕಡೆಗಳಲ್ಲಿ ಸಾರ್ವಜನಿಕರು ವಿದ್ಯುತ್ ಕಂಬ ಅಥವಾ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಯುಜಿ ವಿತರಣಾ ಘಟಕ ಅಥವಾ ಬಾಕ್ಸ್ ಹತ್ತಿರ ತೆರಳಬಾರದು. ವಿದ್ಯುತ್ ಉಪಕರಣಗಳಿಂದ ಆದಷ್ಟು ದೂರವಿದ್ದರೆ ಅನಾಹುತ ಸಂಭವಿಸುವುದನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ.
ಇದನ್ನು ಒದಿ : https://cnewstv.in/?p=9875
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
2022-05-19