ರೋಸ್ಮರ್ ಪದ್ಧತಿ ಅನುಸರಿಸದೇ ಪಿಯು ಪುವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.
Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರೋಸ್ಮರ್ ಪದ್ಧತಿ ಅನುಸರಿಸದೇ ಪಿಯು ಪುವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ
ಆಗ್ರಹ.
ಶಿವಮೊಗ್ಗ : ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಪಿಯು ಪುವೇಶಕ್ಕೆ ವಿದ್ಯಾರ್ಥಿಗಳು ಪೋಷಕರು ಮುಂದಾಗಿದ್ದು, ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಸರ್ಕಾರದ ರೋಸ್ಟರ್ ಪದ್ಧತಿ ಅನುಸರಿಸದೇ ಪ್ರವೇಶ ನೀಡುತ್ತಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ತೀವ್ರವಾಗಿ ಖಂಡಿಸಲಾಯಿತು.
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಣ ಇಲಾಖೆ ರೋಸ್ಮರ್ ಪದ್ಧತಿಯನ್ನು ಜಾರಿಗೊಳಿಸಿತ್ತು. ಆದರೆ, ಈ ಬಾರಿ ಜಿಲ್ಲೆಯ ಬಹುತೇಕ ಖಾಸಗಿ ಕಾಲೇಜುಗಳು ಈ ಪದ್ಧತಿ ಅನುಸರಿಸದೇ ಹೆಚ್ಚು ಹಣ ಕೊಟ್ಟವರಿಗೆ ಸೀಟು ಕೊಡುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ.
ಕೂಡಲೇ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಪುವೇಶ ದೊರಕುವಂತ ನೋಡಿಕೊಳ್ಳಬೇಕು ಎಂದು ಆಗ್ರಹಿಸುತ್ತಿದ್ದೇವೆ. ಕೂಡಲೇ ಇಲಾಖೆಯಿಂದ ಕ್ರಮ ಕೈಗೊಳ್ಳದಿದ್ದಲ್ಲಿ ಎನ್.ಎಸ್.ಯು.ಐ. ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ತೀವ್ರ ಪ್ರತಿಭಟನೆ ನಡೆಸುತ್ತದೆ ಎಂದು ಈ ಮೂಲಕ ಎಚ್ಚರಿಸಲಾಯಿತು.
ಇದನ್ನು ಒದಿ : https://cnewstv.in/?p=9961
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ರೋಸ್ಮರ್ ಪದ್ಧತಿ ಅನುಸರಿಸದೇ ಪಿಯು ಪುವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ. 2022-05-27
Recent Comments