Breaking News

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ..

Cnewstv.in / 27.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ..

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಐ.ಎ.ಎಸ್.‌ ಅಧಿಕಾರಿ ವಂದಿತಾ ಶರ್ಮ ನೇಮಕಗೊಂಡಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್‌ ಅವರು ಇದೇ ಮೇ 31 ಕ್ಕೆ ನಿವೃತ್ತಿಗೊಳ್ಳಲಿದ್ದಾರೆ. ಅಂದು ವಂದಿತಾ ಶರ್ಮ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ವಂದಿತಾ ಶರ್ಮ ಅವರು 1986 ರ ಬ್ಯಾಚಿನ ಕರ್ನಾಟಕ ಕೇಡರ್‌ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ.‌ ಜಿಲ್ಲಾಧಿಕಾರಿಯಾಗಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಪ್ರಸ್ತುತ ಅಪರ ಮುಖ್ಯ ಕಾರ್ಯದರ್ಶಿ, ಮುಖ್ಯ ಅಭಿವೃದ್ಧಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತೆರೆಸಾ ಭಟ್ಟಾಚಾರ್ಯ, ಮಾಲತಿ ದಾಸ್ ಮತ್ತು ರತ್ನ ಪ್ರಭಾ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಥಾನವನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ವಂದಿತಾ ಶರ್ಮಾ ಆಗಿದ್ದಾರೆ.

ಇದನ್ನು ಒದಿ : https://cnewstv.in/?p=9970

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*