ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀಗಳು ನೇಮಕ.
Cnewstv.in / 28.05.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀಗಳು ನೇಮಕ.
ಚಿತ್ರದುರ್ಗ : ಐತಿಹಾಸಿಕ ಪರಂಪರೆ ಹೊಂದಿರುವ ಮುರುಗರಾಜೇಂದ್ರ ಮಠದ ನೂತನ ಉತ್ತರಾಧಿಕಾರಿಯಾಗಿ ಬಸವವಾದಿತ್ಯ ಶ್ರೀಗಳು ನೇಮಕಗೊಂಡಿದ್ದಾರೆ.
ಚಿತ್ರದುರ್ಗ ತಾಲೂಕಿನ ಹುಲ್ಲೂರು ಗ್ರಾಮದ ಶಿವಮೂರ್ತಯ್ಯ ಹಾಗೂ ಚಂದ್ರಕಲಾ ದಂಪತಿಗಳ ಏಕೈಕ ಪುತ್ರ ಬಸವಾದಿತ್ಯ. ಇವರು ಪಿಯುಸಿ ವಿದ್ಯಾಭ್ಯಾಸವನ್ನು ಮುಗಿಸಿ, ಮಠದ ಗುರುಕುಲದಲ್ಲಿಯೇ ಇದ್ದರು.
ಡಾ.ಶಿವಮೂರ್ತಿ ಮುರುಘಾ ಶರಣರು ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಬಸವಾದಿತ್ಯರಿಗೆ ರುದ್ರಾಕ್ಷಿ ಮಾಲೆ ಹಾಕಿ, ಹಣೆಗೆ ವಿಭೂತಿ ಇಟ್ಟು, ಪುಷ್ಪದ ಅಕ್ಷತೆ ಹಾಕಿ ಅನೇಕ ಮಠಾಧೀಶರು, ಸಾವಿರಾರು ಭಕ್ತರ ಸಮ್ಮುಖದಲ್ಲಿ ನೂತನ ಉತ್ತರಾಧಿಕಾರಿ ಎಂದು ಘೋಷಿಸಿದರು.
ಇದನ್ನು ಒದಿ : https://cnewstv.in/?p=9979
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀಗಳು ನೇಮಕ. 2022-05-28