Breaking News

ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ.

Cnewstv.in / 28.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ.

ಬೆಂಗಳೂರು : ಇಂದು ಬೆಳಗ್ಗೆ ಕೆಜಿಎಫ್ ಬಾಬು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ಯುಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರ ವಸಂತನಗರದ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಆರು ಕಾರುಗಳಲ್ಲಿ ಬಂದ ಮೂರು ತಂಡಗಳಲ್ಲಿ ಬಂದ 20 ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿಯ ಮನೆ, ಕಚೇರಿ ಹಾಗೂ ಅವರ ಆತ್ಮೀಯರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಕೆಜಿಎಫ್ ಬಾಬು ಅವರು ಘೋಷಿಸಿದ ಅಸ್ತಿ‌ 1,741 ಕೋಟಿ ರೂಪಾಯಿ ಇದರಲ್ಲಿ ಆದಾಯ ತೆರಿಗೆ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಇದನ್ನು ಒದಿ : https://cnewstv.in/?p=9987

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*