Breaking News

ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ.

Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ.

ಬೆಂಗಳೂರು : ಜುನ್‌ 5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಹುನಿರೀಕ್ಷಿತ ಮುಂಗಾರು ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದರೆ ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಭಾಗಗಳನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಮೇ 27ಕ್ಕೆ ಕೇರಳದಲ್ಲಿ ಮುಂಗಾರು ಪ್ರವೇಶ ವಾಗಲಿದೆ ಎಂದು ತಿಳಿಸಲಾಗಿತ್ತು ಆದರೆ 2 ದಿನಗಳು ತಡವಾಗಿ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಲಿದೆ.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ.

ಇದನ್ನು ಒದಿ : https://cnewstv.in/?p=9996

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*