ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಪರವಾನಿಗೆ ಪಡೆಯದೆ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ಹೇಳಿದರು. ಗುರುವಾರ ಗಾಂಧಿ ಬಜಾರ್‍ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಮೇಯರ್ ಲತಾ ಗಣೇಶ್ ಹಾಗೂ ಉಪ ಮೇಯರ್ ಚನ್ನಬಸಪ್ಪ ಹಾಗೂ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಅವರು, ಇದುವರೆಗೆ ವಾಣಿಜ್ಯ ಪರವಾನಿಗೆ ಪಡೆಯದವರು ತಕ್ಷಣ ಪರವಾನಿಗೆ ಪಡೆಯಲು ಅರ್ಜಿಯನ್ನು ಸಲ್ಲಿಸಿ ಪಡೆಯಬೇಕು. ಈ ವರ್ಷ ನವೀಕರಿಸದವರು ತಕ್ಷಣ ನವೀಕರಿಸಬೇಕು. ...
Read More »Tag Archives: Shivamogga
ಮಾನಸಿಕ ಅಸ್ವಸ್ಥೆಗೆ ಹಿಗ್ಗಾಮುಗ್ಗಾ ಥಳಿತ.
ಶಿವಮೊಗ್ಗ: ಮಾನಸಿಕ ಅಸ್ವಸ್ಥೆಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಜೆ.ಸಿ.ರಸ್ತೆಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಸಾಗರದ ನೆಹರೂ ನಗರ ನಿವಾಸಿ ಕವಿತಾ ಥಳಿತಕ್ಕೊಳಗಾದ ದುರ್ದೈವಿ. ಸಾಗರದ ಜೆ.ಸಿ.ರಸ್ತೆಯ ಅಂಗಡಿಗಳ ಮುಂದೆ ನಿಂತು ಅವಾಚ್ಯವಾಗಿ ನಿಂದಿಸುತ್ತಿದ್ದಳು ಎಂಬ ಹಿನ್ನೆಲೆಯಲ್ಲಿ ಅಂಗಡಿಗಳಲ್ಲಿದ್ದವರು ಹಾಗೂ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರು ಹೊಡೆದಿದ್ದು ಮಾತ್ರವಲ್ಲದೆ ಕಾಲಿನಿಂದ ಒದ್ದು ಕೊಲಿನಿಂದ ಥಳಿಸಿ ಮೃಗೀಯ ವರ್ತನೆ ತೋರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಆಕೆಯ ಸಂಬಂಧಿಕರು ಗಂಭೀರವಾಗಿ ಗಾಯಗೊಂಡಿದ್ದ ಕವಿತಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಸಂಬಂಧ ...
Read More »ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ.
ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ. ಶಿವಮೊಗ್ಗ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರನ್ನು ಮಹಾ ನಗರ ಪಾಲಿಕೆ ಎಲ್ಲ ಬಡಾವಣೆಯಲ್ಲೂ ನೀಡುತ್ತಿದ್ದು ಆದರೆ ನೀರು ಸರಬರಾಜು ಮಾಡುವ ಸಿಬ್ಬಂದಿಗಳೇ ಇಂದು ಹೊಸಮನೆ ಬಡಾವಣೆಯಲ್ಲಿ ತಮಗೆ ಬೇಕಾದವರಿಗೆ ಟ್ಯಾಂಕ್ ಗಟ್ಟಲೆ ನೀರನ್ನು ಒಂದೇ ಮನೆಗೆ ಸರಬರಾಜನ್ನು ಮಾಡಿದ್ದು ಅಲ್ಲಿಯ ಸಾರ್ವಜನಿಕರು ಸಂಘ ಸಂಸ್ಥೆಗಳ ಮುಖಂಡರು ವಾಟರ್ ಟ್ಯಾಂಕರ್ ಲಾರಿಯನ್ನು ತಡೆದು ಅಧಿಕಾರಿಗಳಾದ AEE ಸಿದ್ದಪ್ಪ ಹಾಗೂ ಬಲರಾಮ ರವರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿಯಲಿಕ್ಕೆ ಎರಡು ಕೊಡಪಾನ ನೀರು ಸಿಗುತ್ತಿಲ್ಲ ...
Read More »ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ.
ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ. ಶಿವಮೊಗ್ಗ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಾಗಲು ಮಲೆನಾಡಿಗರು ಕಾರಣವಲ್ಲ. ಹೀಗಿರುವಾಗ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಏಕೆ ನೀರು ಪೂರೈಕೆ ಮಾಡಬೇಕು. ಈಗಾಗಲೇ ಅಣೆಕಟ್ಟೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಅರಣ್ಯವನ್ನು ನಾಶ ಮಾಡಿ ಮಲೆನಾಡನ್ನೇ ಹಾಳು ಮಾಡಲಾಗಿದೆ. ಇದೀಗ ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರು ಒದಗಿಸಲು ಮತ್ತೆ ಅರಣ್ಯ ನಾಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಲೆನಾಡಿಗರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಲಿಂಗನಮಕ್ಕಿ ನೀರನ್ನು ಮಲೆನಾಡಿನ ಜನರಿಗೇ ನೀಡಿ ಎಂದು ಹೋರಾಟದ ಹಾದಿಯನ್ನೂ ಹಿಡಿದಿದ್ದಾರೆ. ರಾಜ್ಯದಲ್ಲಿ ಯಾವುದೇ ...
Read More »ಮಾಜಿ ಶಾಸಕ ಅಪ್ಪಾಜಿ ಗೌಡರಿಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಐಟಿ ದಾಳಿ.
ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ… ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ...
Read More »ವರುಣನ ಆಗಮನದಿಂದ ಶಿವಮೊಗ್ಗ ಕೂಲ್ ಕೂಲ್.
ಬಿಸಿಲಿನಿಂದ ಹೈರಾಣಾಗಿದ್ದ ಮಲೆನಾಡಿನ ಜನತೆಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ..ನಗರದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಗೆ ಜನ ಖುಷಿಯಾಗಿದ್ದಾರೆ.. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಆಗಿದೆ..ಶಿವಮೊಗ್ಗ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳನ್ನು ಸಹ ಮಳೆಯಾಗಿದೆ..
Read More »
Recent Comments