Breaking News

Tag Archives: Shivamogga

ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ರಾಣೆಬೆನ್ನೂರು ಅಭ್ಯರ್ಥಿ!

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಅವರು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಹೌದು ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಕಾಂತೇಶ್ ಅಭಿಮಾನಿಗಳು ಒತ್ತಾಯಿಸಲಾರಂಭಿಸಿದ್ದಾರೆ. ಈ ಬಗ್ಗೆ ಪೇಸ್ ಬುಕ್ ನಲ್ಲಿ ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಕಾಂತೇಶಣ್ಣ ಎಂಬ ಪೇಜನ್ನು ಓಪನ್ ಮಾಡಿದ್ದಾರೆ. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ದಯವಿಟ್ಟು ಕಾಂತೇಶ್ ...

Read More »

ಆಯುಷ್ಮಾನ್ ಭಾರತ ಜಾಥಾಗೆ ಚಾಲನೆ

ಶಿವಮೊಗ್ಗ: ಆಯುಷ್ಮಾನ್ ಭಾರತ ಪಾಕ್ಷಿಕ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಇಂದು ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೂ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನಸಾಮನ್ಯರಿಗೆ ತಲುಪುವಂತೆ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ...

Read More »

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆರೋಗ್ಯ ಶಿಬಿರ ಆಯೋಜನೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನಾರಾಯಣ ಹೃದಯಾಲಯ, ಸರ್ಜಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ನಗರ ಬಿಜೆಪಿ ಆಯೋಜಿಸಿದ್ದ ಆರೋಗ್ಯ ಶಿಬಿರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಂಸದ ರಾಘವೇಂದ್ರ, ಪ್ರಪಂಚ ಕಂಡ ಅಪ್ರತಿಮ ನಾಯಕ ಪ್ರಧಾನಿ ಮೋದಿಯವರು. ಅವರ ಜನ್ಮದಿನದ ಅಂಗವಾಗಿ ನಮ್ಮ ಸಂಘಟನೆ ರಾಷ್ಟ್ರಾಧ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ...

Read More »

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಗೆ ಸಿದ್ಧವಾದ ರಕ್ಷಣಾ ಇಲಾಖೆ

ನಾಳೆ ವಿಸರ್ಜನೆಗೊಳ್ಳುತ್ತಿರುವ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಓರ್ವ ಎಸ್ಪಿ, ಮೂವರು ಎಎಸ್ಪಿ, 16 ಡಿವೈಎಸ್ಪಿ, 51 ಇನ್ಸ ಸ್ಪೆಕ್ಟರ್ ಅಂಡ್ ಸಬ್ ಇನ್ ಸ್ಪೆಕ್ಟರ್, 3000 ಕ್ಕೂ ಅಧಿಕ ಪೊಲೀಸ್ ತುಕಡಿ, 14 ಕೆ.ಎಸ್.ಆರ್.ಪಿ 13 ಡಿಎಆರ್, 200 ಹೆಚ್ಚುವರಿ ಸಿಸಿ ಕ್ಯಾಮೆರಾ, 3 ಡ್ರೋಣ್ ಅಳವಡಿಸಿಕೊಳ್ಳಲಾಗಿದೆ. 700 ಜನರನ್ನ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನ ಗುರುತಿಸಿ ಅವರನ್ನ ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯನ್ನ ...

Read More »

ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಗಳ ನಡುವೆ ಡಿಕ್ಕಿ..

ಶಿವಮೊಗ್ಗ: ಸಾಗರ ತಾಲೂಕಿನ ಸಿಗಂದೂರು ಬಳಿಯ ಶರಾವತಿಯ ಹಿನ್ನೀರಿನಲ್ಲಿ‌ಎರಡು ಲಾಂಚ್ ಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ 500 ಕ್ಕುಹ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ಸಂಚರಿಸುವ ಶರಾವತಿ-1 ಹಾಗೂ ಶರಾವತಿ-2 ಲಾಂಚ್ ಗಳ ನಡುವೆ ಅಂಬಾರಗೋಡ್ಲು ದಡದ ಸಮೀಪ ಡಿಕ್ಕಿ ಸಂಭವಿಸಿದೆ. ಲಾಂಚ್ ಚಾಲಕರುಗಳ ನಿರ್ಲಕ್ಷವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾಂಚ್ ಗಳ ಡಿಕ್ಕಿಯಲ್ಲಿ ಎರಡೂ ಲಾಂಚ್ ಗಳೂ ಜಖಂಗೊಂಡಿವೆ. ಆದರೆ ಸಂಚಾರ ನಡೆಸಲು ಯಾವುದೇ ಸಮಸ್ಯೆ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದ ಬಳಿಕವೂ ಮತ್ತೆ ಸಂಚಾರ‌ ಆರಂಭಿಸಿವೆ.

Read More »

ಸಚಿವ ನಾಗೇಶ್ ಅಣಕು ಶವಯಾತ್ರೆ.

ಶಿವಮೊಗ್ಗ :ಬಂಜಾರ ತಾಂಡಗಳ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ನಾಗೇಶ್ ವಿರುದ್ಧ ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಬಸ್ ನಿಲ್ದಾಣದಿಂದ ಗೋಪಿವೃತ್ತದವರೆಗೆ ಸಚಿವ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದ ಬಂಜಾರ ಸಮುದಾಯದವರು ಸಚಿವ ನಾಗೇಶ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾಗೇಶ್ ಬಂಜಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು ತಮಟೆ, ಚಟ್ಟದೊಂದಿಗೆ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದರು. ಬಳಿಕ ಗೋಪಿ ವೃತ್ತದಲ್ಲಿ ನಾಗೇಶ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದರು. ಬಳಿಕ ನಾಗೇಶ್ ...

Read More »

ಮದ್ಯಪಾನ ಮಾಡಿದ್ದ ಕಾರು ಚಾಲಕನಿಗೆ ಬಿತ್ತು ಭಾರಿ ದಂಡ

ಶಿವಮೊಗ್ಗ: ಮದ್ಯಪಾನ ಮಾಡಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನೊಬ್ಬ ದೊಡ್ಡ ಮೊತ್ತದ ದಂಡ ಪಾವತಿಸಿದ್ದಾನೆ. ನೂತನ ವಾಹನ ಕಾಯ್ದೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಹೌದು ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬರು ಬರೋಬ್ಬರಿ 12 ಸಾವಿರ ರೂ. ದಂಡ ತೆತ್ತಿದ್ದಾರೆ. ಶಿಕಾರಿಪುರದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗದ 3ನೇ ಜೆಎಂಎಫ್‌ಸಿ ನ್ಯಾಯಾಲಯವು 12 ಸಾವಿರ ರೂ. ದಂಡ ವಿಧಿಸಿದೆ. ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಪ್ರಕರಣದಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ಸಂಚಾರ ಪೊಲೀಸರು ವಾಹನ ತಡೆದು ತಪಾಸಣೆ ...

Read More »

ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬುಧವಾರ ಸಂಜೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆಯ ಬಗ್ಗೆ, ಇಲ್ಲಿನ ವೈದ್ಯರ ಬಗ್ಗೆ ದಿನನಿತ್ಯ ನಿರಂತರ ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.. Contact for Advertisement : 7676236690 

Read More »

ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಪೆಂಡಾಲ್‍ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ...

Read More »

ಜಿಮ್ ಟ್ರೈನರ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ವಿಫಸ್ಟ್ ಜಿಮ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಮ್ ಎದುರು ಪ್ರತಿಭಟನೆ ನಡೆಸಿದರು. ಜಿಮ್ ನ ಮಾಲೀಕ ಹಾಗೂ ಟ್ರೈನರ್ ಆಗಿರುವ ರಾಜ್ ಕದಂಬ ಎಂಬಾತ ಜಿಮ್ ಗೆ ಬರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಜಿಮ್ ನಲ್ಲೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ. ಈತನ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಜಿಮ್ ನ ಬಾಗಿಲು ಮುಚ್ಚಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವವನ್ನು ...

Read More »