ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು 18 ವರ್ಷದ ಸುನೈನಾ ಎಂಬ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸುನೈನಾ ನಗರದ ಚನ್ನಪ್ಪ ಲೇಔಟ್ ನಿವಾಸಿಯಾಗಿದ್ದು, ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಸಮೀಪದ ನಂಜಪ್ಪ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..
Read More »Tag Archives: Accident
ಸಾಗರದ ಉಳ್ಳೂರು ಕ್ರಾಸ್ ಬಳಿ ಸ್ಲೀಪರ್ ಬಸ್ ಪಲ್ಟಿ ಮೂರು ಸಾವು ಹಲವರಿಗೆ ಗಾಯ..
ಶಿವಮೊಗ್ಗದ ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ಸ್, ಸಾಗರ ತಾಲೂಕಿನ ಉಳ್ಳೂರು ಸಮೀಪ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ..ಕೀರ್ತನಾ(12), ಸುಜಾತ(40), ಮಹಮದ್ ಯಾಸಿನ್(16) ಎಂಬ ಮೂವರು ಪ್ರಯಾಣಿಕರ ಸಾವನ್ನಪ್ಪಿದ್ದಾರೆ. ಪಲ್ಟಿಯಾಗಿರುವ ಬಸ್ ನ ಅಡಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಸಾಧ್ಯತೆ ಇದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ..
Read More »ಲಾರಿಗಳ ಮುಖಾಮುಖಿ ಡಿಕ್ಕಿ ಮೂವರ ಸಾವು
ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಹಾಗೂ ಡಾಂಬರು ತುಂಬಿದ ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಸಾಗರ ಕಡೆಗೆ ಬರುತ್ತಿದ್ದು, ಡಾಂಬರ್ ತುಂಬಿದ ಲಾರಿ ಶಿವಮೊಗ್ಗ ಕಡೆ ಹೋಗುತ್ತಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಡಾಂಬರ್ ಲಾರಿಯ ಚಾಲಕ ಸೋಮವಾರ ಪೇಟೆಯ ಸಚಿನ್ (25) ಕಂಡಕ್ಟರ್ ಬಿಜಾಪುರದ ತಾಳಿಕೋಟೆ ಮಲಕಪ್ಪ(22)ಮತ್ತು ಗ್ಯಾಸ್ ಲಾರಿಯ ಚಾಲಕ ಶಿಕಾರಿಪುರದ ಕಲವತ್ತಿಯ ಲೋಕೇಶ್(42) ಮೃತಪಟ್ಟಿದ್ದಾರೆ. ...
Read More »ಭೀಕರ ರಸ್ತೆ ಅಪಘಾತ -ಓರ್ವ ಸಾವು, ಮೂವರಿಗೆ ಗಂಭೀರ ಗಾಯ.
ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಬಾಲ ಸಾಹೇಬ್ ಕೃಷ್ಣ ದೇಸಾಯಿ(48) ಎಂಬುವವರು ಮೃತಪಟ್ಟಿದ್ದಾರೆ. ಹಾಗು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಇದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ. ಭೀಕರ ರಸ್ತೆ ಅಪಘಾತ -ಓರ್ವ ಸಾವು, ಮೂವರಿಗೆ ಗಂಭೀರ ಗಾಯ.
Read More »
C News TV Kannada News Online in cnewstv