ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏಪ್ರಿಲ್ 19ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 1166 ಪ್ರಕರಣಗಳು ದಾಖಲಾಗಿದೆ. 1,60,450 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..
Read More »Tag Archives: Shivamogga
ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ : ಸಾರ್ವಜನಿಕರಿಂದ ಮೆಚ್ಚುಗೆ
ಶಿವಮೊಗ್ಗ : ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರು ಇಂದು ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಾಸ್ಕ್ ಧರಿಸದೆ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಎಚ್ ಟಿ ಶೇಖರ್ ಡಿವೈಎಸ್‍ಪಿ ಪ್ರಶಾಂತ್ ಮತ್ತು ಪೊಲೀಸರ ತಂಡ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದನ್ನು ಗಮನಿಸಿದರು. ಮಾಸ್ಕ್ ಧರಿಸದವರಿಗೆ ತಿಳಿವಳಿಕೆ ಹೇಳಿ, ...
Read More »ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದವರ ವಿರುದ್ಧ ದಾಖಲಾದ ಪ್ರಕರಣಗಳು ಹಾಗೂ ಸಂಗ್ರಹಿಸಿದ ದಂಡದ ಮೊತ್ತ ಗೊತ್ತಾ ??
ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏಪ್ರಿಲ್ 18 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 517 ಪ್ರಕರಣಗಳು ದಾಖಲಾಗಿದೆ. 80800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..
Read More »ಶಿವಮೊಗ್ಗ ಜಿಲ್ಲೆಯಾದ್ಯಂತ ಮಾರ್ಚ್ ತಿಂಗಳಿನಲ್ಲಿ ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಎಷ್ಟು ಪ್ರಕರಣಗಳು ದಾಖಲಾಗಿದೆ ಗೊತ್ತಾ ?!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಪೊಲೀಸ್ ಇಲಾಖೆ ಯಿಂದ ಕಾರ್ಯಾಚರಣೆ ನಡೆಸಿ ಮಾರ್ಚ್ 1 ರಿಂದ ಮಾರ್ಚ್ 31ರ ವರೆಗೆ ಒಟ್ಟು 1694 ಪ್ರಕರಣಗಳನ್ನು ದಾಖಲಿಸಿ, ರೂ 2,23,350 ದಂಡ ವಿಧಿಸಿ ಕ್ರಮ ಕೈಗೊಂಡಿದೆ ಎಂದು ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಎಂ ಶಾಂತರಾಜು ರವರು ತಿಳಿಸಿರುತ್ತಾರೆ. ತಾಲ್ಲೂಕುವಾರು ದಾಖಲಾದ ಪ್ರಕರಣಗಳು : ಶಿವಮೊಗ್ಗ ತಾಲ್ಲೂಕ್ : ಒಟ್ಟು 468 ಪ್ರಕರಣಗಳನ್ನು ದಾಖಲಿಸಿ ರೂ 1,00,750 ದಂಡ ವಿಧಿಸಲಾಗಿದೆ. ಭದ್ರಾವತಿ ತಾಲ್ಲೂಕ್ : ಒಟ್ಟು 827 ಪ್ರಕರಣಗಳನ್ನು ದಾಖಲಿಸಿ ...
Read More »ತಾಳಗುಪ್ಪದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಸಾವು.
ಶಿವಮೊಗ್ಗ: ಸೈಕಲ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಸೈಕಲ್ ಸವಾರ ಅಣ್ಣಪ್ಪ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ- 206 ರಲ್ಲಿ ತಾಳಗುಪ್ಪದ ಬಳಿ ನಡೆದ ಘಟನೆ ನಡೆದಿದ್ದು, ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.
Read More »ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಭಿನಂದನೆ.
ಶಿವಮೊಗ್ಗ, 72ನೇ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ .ಎಂ.ಕೆ ರವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯಾಗಿರುವ ಅನ್ನಪೂರ್ಣ ಇತ್ತೀಚಿಗೆ ನಡೆದ ಪರೇಡ್ ನಲ್ಲಿ ಭಾಗಿವಹಿಸಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಎನ್ಎಸ್ಎಸ್ ಘಟಕ ಹಾಗೂ ಸ್ಪಂದನಾ ಮಹಿಳಾ ಸಬಲೀಕರಣ ಘಟಕದಿಂದ ಸನ್ಮಾನಿಸಿ, ಗೌರವಿಸಲಾಗಿದೆ. ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಂ.ಸುರೇಶ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಫ್ರೊ.ಕೆ.ಎಂ.ನಾಗರಾಜು, ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
Read More »ಶಿವಮೊಗ್ಗದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್.
ಶಿವಮೊಗ್ಗ: ಕರೋನಾ ವಿರುದ್ಧ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದೆ. ಶಿವಮೊಗ್ಗದ ತುಂಗಾನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ತಲಾ 50 ಸಿಬ್ಬಂದಿಯನ್ನು ಇದಕ್ಕಾಗಿ ಆಯ್ಕೆ ಸಹ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಪ್ರಾಥಮಿಕ ಆರೋಗ್ಯ ...
Read More »ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.
ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...
Read More »ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆ
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ...
Read More »ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...
Read More »
Recent Comments