ಶಿವಮೊಗ್ಗ : ಮಹಿಳೆಯೊಬ್ಬರಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸರಗಳ್ಳರನ್ನು ಪೊಲೀಸರು ಬುಧವಾರ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿಕಾರಿಪುರ ಉಪ-ವಿಭಾಗದ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿ ಬಸಮ್ಮ ಕೋಂ ದಿ||ಯಲ್ಲಪ್ಪ ಎಂಬುವವರು ಅಕ್ಟೋಬರ್ 22 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಎರಡು ಜನ ಅಪರಿಚಿತರು ಆಸ್ಪತ್ರೆಯ ಮುಂಭಾಗ ನಕಲಿ ಬಂಗಾರದ ಸರವನ್ನು ತೋರಿಸಿ ಆ ನಕಲಿ ಬಂಗಾರದ ಸರವನ್ನು ಕೊಟ್ಟು ನಂತರ 3,500 ರೂ. ನಗದು ಹಾಗೂ ...
Read More »Tag Archives: Shivamogga
ಅವಾಂತರ ಸೃಷ್ಟಿಸಿದ ಅರ್ಧಗಂಟೆ ಮಳೆ
ಶಿವಮೊಗ್ಗ: ಇಂದು ಸಂಜೆ ವೇಳೆ ಅರ್ಧ ಗಂಟೆ ಸುರಿದ ಮಳೆ ಶಿವಮೊಗ್ಗ ನಗರದಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗುತ್ತಿದೆ. ಆದರೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರಂಭವಾದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಎಲ್ಲ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ಶಿವಮೊಗ್ಗ ಪಾರ್ಕ್ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆ ಮೇಲೆ ಬರೋಬ್ಬರಿ ಎರಡು ಅಡಿಗೂ ಹೆಚ್ಚು ನೀರು ನಿಂತಿತ್ತು. ಅರ್ಧ ಗಂಟೆ ಸುರಿದ ಧಾರಾಕಾರ ಮಳೆ ...
Read More »5 ಗಂಟೆಗಳ ಸತತ ಕಾರ್ಯಾಚರಣೆ.ಹಿಡ್ಲಮನೆ ಜಲಪಾತದ 80 ಅಡಿ ಎತ್ತರದಲ್ಲಿ ಸಿಲುಕಿದ ಪ್ರವಾಸಿಗನ ರಕ್ಷಣೆ.
ಶಿವಮೊಗ್ಗ : ಕೊಡಚಾದ್ರಿ ಹಿಡ್ಲಮನೆ ಜಲಪಾತ ನೋಡಲು ಬಂದು ಪ್ರಪಾತದಿಂದ 80 ಅಡಿಗಳ ಮೇಲೆ ಸಿಲುಕಿಕೊಂಡ ಅಮೋಘ (29) ಎಂಬ ಯುವಕನನ್ನು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿದಂತೆ 50ಕ್ಕೂ ಹೆಚ್ಚು ಜನರ ತಂಡ ಸತತ 5 ಗಂಟೆಗಳ ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಸನ ಮೂಲದ ಅಮೋಘ ತಮಿಳುನಾಡು ಮೂಲದ ಸಂಜೀವ್ ಕಪೂರ್ ಮೂಲದ ಮಧು ಎಂಬುವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದು ಹೋಂಸ್ಟೇನಲ್ಲಿ ತಂಗಿದ್ದರು. ಬೆಳಿಗ್ಗೆ ಜೀಪಿನಲ್ಲಿ ಕೊಡಚಾದ್ರಿ ಗಿರಿ ಹತ್ತಿ ...
Read More »ಸಿಗಂದೂರಲ್ಲಿ ನಡೆದ ಘಟನೆ ಶೋಭೆ ತರುವಂತದ್ದಲ್ಲ – ಸಿಎಂ
ಶಿವಮೊಗ್ಗ: ಸಿಗಂದೂರಿನಲ್ಲಿ ಎರಡು ದಿನದ ಹಿಂದೆ ನಡೆದಿರುವ ಘಟನೆ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಜಿಲ್ಲಾಧಿಕಾರಿ ಸಿಗಂದೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಯಿಂದ ಸಿಗಂದೂರು ದೇವಾಲಯದ ಘಟನೆ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಜೊತೆಗೆ ದೇವಾಲಯದ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದರು.
Read More »ಮೂವರು ದರೋಡೆಕೋರರ ಬಂಧನ, ಕೃತ್ಯಕ್ಕೆ ಬಳಸಿದ ಓಮಿನಿ ವಾಹನ ವಶ
ಶಿವಮೊಗ್ಗ : ಅಕ್ಟೋಬರ್ 14ರಂದು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ್ದ ಮೂವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಮನೆಯಲ್ಲಿರುವ ಸಮಯದಲ್ಲಿ ಯಾರೋ 05 ಜನ ದರೋಡೆಕೋರರು ಮನೆಗೆ ನುಗ್ಗಿ, ತಮ್ಮ ಕೊರಳಿನಲ್ಲಿದ್ದ ಬಂಗಾರದ ಗುಂಡುಗಳಿದ್ದ ತಾಳಿ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿಗಳ ಪತ್ತೆಗಾಗಿಶ್ರೀನಿವಾಸಲು IPS, ಎ.ಎಸ್.ಪಿ ಶಿಕಾರಿಪುರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿಮರುಳಸಿದ್ದಪ್ಪ ಪೊಲೀಸ್ ...
Read More »ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯ 271ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್‍ಗೆ ತಲಾ 20ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್‍ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ...
Read More »ಶಿವಮೊಗ್ಗದಲ್ಲಿ ಗಾಂಧೀಜಿ ಅವರ ಕುರುಹುಗಳೇನು ಗೊತ್ತಾ ??
ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ ಬಾ ಅವರು 1927ರ ಆಗಸ್ಟ್ 14 ರಂದು ...
Read More »ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೇ ಕದ್ದ ಖದೀಮ.
ಶಿವಮೊಗ್ಗ: ಮಾಸ್ಕ ಹಾಕದೆ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹೊಸನಗರ ಠಾಣೆ ಪೊಲೀಸರು ದಂಡ ವಿಧಿಸಿದ್ದರು. ಆದರೆ ದಂಡ ಕಟ್ಟಿದ ಸಿಟ್ಟಿಗೆ ಆತ ಪೊಲೀಸರ ಬೈಕನ್ನೇ ಕದ್ದು ಪರಾರಿಯಾಗಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೌದು ಚೇತನ್ ಎಂಬಾತ ಮಾಸ್ಕ್ ಹಾಕದೆ ಓಡಾಡುತ್ತಿದ್ದಾಗ ಪೊಲೀಸರು ಆತನನ್ನು ಹೊಸನಗರ ಪೊಲೀಸ್ ಠಾಣೆಗೆ ಕರೆತಂದು ದಂಡ ವಿಧಿಸಿದ್ದಾರೆ. ದಂಡ ಪಾವತಿಸಿ ಹೊರಬಂದ ಚೇತನ್ ಪೊಲೀಸ್ ಠಾಣೆ ಪಕ್ಕದಲ್ಲೇ ನಿಲ್ಲಿಸಿದ್ದ ಪೊಲೀಸ್ ಪೇದೆ ರಾಘವೇಂದ್ರ ಅವರ ಬೈಕ್ ಕದ್ದು ಪರಾರಿಯಾಗಿದ್ದಾನೆ. ಈ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ...
Read More »ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ಶಿವಮೊಗ್ಗ ನಂಬರ್ ಓನ್
ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳಿಗೂ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಹಿಂಬಾಲಕರನ್ನು ವೃದ್ಧಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ ಓನ್ ಸ್ಥಾನಕ್ಕೆ ಏರಿದೆ. ಜುಲೈ 16 ರಿಂದ ಸೆಪ್ಟಂಬರ್ 15 ರವರೆಗಿನ ಅವಧಿಯಲ್ಲಿ ಯಾರು ಹೆಚ್ಚು ಫೇಸ್ ಬುಕ್ ಹಿಂಬಾಲಕರನ್ನು ಹೊಂದುತ್ತಾರೆಯೋ ಅವರು ಪ್ರಥಮ ಸ್ಥಾನ ಪಡೆಯುತ್ತಾರೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿತ್ತು. ಅದರಂತೆ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ...
Read More »ಈ ಬಾರಿ ಅತ್ಯಂತ ಸರಳವಾಗಿ ದಸರ ಆಚರಣೆ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಕರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿರಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು. ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ: ಚಂದ್ರಶೇಖರ ಆಜಾದ್ ...
Read More »
Recent Comments