ಶಿವಮೊಗ್ಗ : ಶಿವಮೊಗ್ಗ ದಿಂದ N R ಪುರಕ್ಕೆ ತೆರಳುತ್ತಿದ್ದ ಸೆಲೆರಿಯೋ ಕಾರು ಕಾಚಿನಕಟ್ಟೆಯ ಬಳಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರನ್ನ ಕಟ್ ಮಾಡುವ ಮೂಲಕ ಕಾರಿನಲ್ಲಿದ್ದ ಜನರನ್ನು ಹೊರಗೆ ತೆಗೆಯಲಾಯಿತು. ಇವರನ್ನೆಲ್ಲ ಎನ್ಆರ್ ಪುರ ನಿವಾಸಿಗಳು ಎಂದು ಹೇಳಲಾಗಿದೆ. ಆದರೆ ಯಾವುದೇ ನಿಖರವಾದ ಮಾಹಿತಿಗಳು ದೊರೆತಿಲ್ಲ. ತುಂಗಾ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »Tag Archives: Shivamogga
ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತ್ ಕಾರ್ಯದರ್ಶಿ ಎಸಿಬಿ ಬಲೆಗೆ.
ಶಿಕಾರಿಪುರ : ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಪಂಚಾಯತ್ ನ ಕಾರ್ಯದರ್ಶಿ ಶಿವಪ್ಪ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದಿದ್ದಾರೆ. ಇಂದು ಮಾಧ್ಯಹ್ನ ಗ್ರಾಮ ಪಂಚಾಯತಿ ಕಛೇರಿಯಲ್ಲಿ NREG ಕೆಲಸದ 2,10,000 ಹಣವನ್ನು ಬಿಡುಗಡೆ ಮಾಡುವ ವಿಚಾರವಾಗಿ ಮಂಜುನಾಥ ಎಂಬುವರ ಬಳಿ 8,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ನೇರವಾಗಿ ಎಸಿಬಿ ಡಿವೈಎಸ್ ಪಿ ಲೋಕೇಶ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Read More »ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.
ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ. ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
Read More »ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಣೆ. Exclusive video.
ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಜೋಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರು ಇಂದಿರಾನಗರದ ಚೇತನ್ ಕುಮಾರ್ ಎಂಬಾತ ಅಪಾಯದ ಸ್ಥಳವಾಗಿರುವ ರಾಣಿ ಫಾಲ್ಸ್ ಮೇಲೆ ಹೋಗಿ ಕುಳಿತಿದ್ದ. ವಿಷಯ ತಿಳಿದ ಪೊಲೀಸರು ಮೂರು ಗಂಟೆಗಳ ಕಾಲ ಚೇತನ್ ಕುಮಾರ್ ಮೇಲೆ ನಿಗಾ ಇರಿಸಿ ಸಾಗರದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಜೋಗಕ್ಕೆ ಬಂದ ಬಳಿಕ ಚೇತನ್ ಕುಮಾರ್ ನನ್ನು ರಕ್ಷಿಸಿ ಕರೆದುಕೊಂಡು ಬಂದಿದ್ದಾರೆ. ಈ ಸಂಬಂಧವಾಗಿ ಜೋಗ ಪೊಲೀಸ್ ಠಾಣೆಯಲ್ಲಿ ...
Read More »ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟ D.Boss. ಇನ್ನೂ ಒಂದೆರೆಡು ದಿನ ಶಿವಮೊಗ್ಗದಲ್ಲಿ ಪ್ರವಾಸ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇವತ್ತು ನಟರ ಟೀಮ್ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಲಿದೆ. ಮಧ್ಯಾಹ್ನದವರೆಗೆ ಸಫಾರಿಯಲ್ಲಿ ಭಾಗವಹಿಸಲಿದ್ದಾರೆ. ಅಭಯಾರಣ್ಯದ ಮಧ್ಯದಲ್ಲಿರುವ ಬ್ರಿಟೀಷರ ಕಾಲದ ಬಂಗಲೆಯಲ್ಲಿ ...
Read More »15 ದಿನದ ನವಜಾತ ಶಿಶುವಿನ ಮಾರಾಟಕ್ಕೆ ಯತ್ನ
ಶಿವಮೊಗ್ಗ : ಟಿಪ್ಪು ನಗರದಲ್ಲಿ 15 ದಿನದ ನವಜಾತ ಶಿಶುವನ್ನು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳನ್ನು ತುಂಗಾ ನಗರ ಪೊಲೀಸ್ ಠಾಣೆಯ ಪೋಲಿಸರು ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ಲಕ್ಷದ 50 ಸಾವಿರ ರೂಪಾಯಿಗೆ ಮಗುವನ್ನು ಮಾರಟ ಮಾಡಲು ಯತ್ನಿಸಿದ್ದ ಶೈಲ, ಸುಮಾ, ತುಳಸಿ, ಉಷಾ ಹಾಗೂ ಷಣ್ಮುಗ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀನಿವಾಸ್ ಮತ್ತು ಉಷಾ ದಂಪತಿಗಳಿಗೆ ಕಳೆದ 15 ದಿನಗಳ ಹಿಂದೆ ಗಂಡು ಮಗುವಾಗಿದೆ. ಬಡತನದ ಹಿನ್ನೆಲೆಯಲ್ಲಿ ಈ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದು ಒಂದು ಒಳ್ಳೆಯ ...
Read More »ಕೆಲವು ವಾರ್ಡ್‍ಗಳು ಪೂರ್ಣ ಸೀಲ್‍ಡೌನ್
ಶಿವಮೊಗ್ಗ : ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ ಜಿಲ್ಲೆಯಾದ್ಯಂತ ಇಂದಿನಿಂದ ಲಾಕ್‍ಡೌನ್ ತೆರವುಗೊಳಿಸಲಾಗಿದ್ದು, ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5ರವರೆಗೆ ಮಾತ್ರ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿರುವ ಹಳೆ ಶಿವಮೊಗ್ಗ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಜುಲೈ 23ರ ಬೆಳಿಗ್ಗೆ 5ರಿಂದ ಜುಲೈ 29ರ ರಾತ್ರಿ 9ಗಂಟೆಯವರೆಗೆ ಸಂಪೂರ್ಣ ಸೀಲ್‍ಡೌನ್ ಇರಲಿದೆ ಎಂದು ಸ್ಪಷ್ಟಪಡಿಸಿದರು. ಹಳೆ ಶಿವಮೊಗ್ಗ ಕ್ಲಸ್ಟರ್‍ನಲ್ಲಿ ಬರುವ ವಾರ್ಡ್ ಸಂಖ್ಯೆ 22, 23, 29 ಮತ್ತು ...
Read More »ಒಂದು ಗಂಟೆಯ ಮಳೆಗೆ ಪ್ರತಿಷ್ಟಿತರ ಬಡಾವಣೆಗೆ ನುಗ್ಗಿದ ನೀರು
ಶಿವಮೊಗ್ಗ: ಕೇವಲ ಒಂದು ಗಂಟೆ ಸುರಿದ ಮಳೆಗೆ ಶಿವಮೊಗ್ಗದ ಪ್ರತಿಷ್ಟಿತ ಬಡಾವಣೆಯೊಂದರ ಮನೆಯೊಳಗೆ ನೀರು ನುಗ್ಗಿದೆ. ಕೇವಲ ಒಂದು ಗಂಟೆಯ ಮಳೆಗೆ ಪ್ರತಿಷ್ಟಿತ ಬಡಾವಣೆಯ ಮನೆಗಳಿಗೆ ನೀರು ನುಗ್ಗಲು ಕಾರಣವೇನು ಎಂಬ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ. ಹೌದು ಇಂದು ಮಧ್ಯಾಹ್ನದ ಬಳಿಮ ಸುರಿದ ಮಳೆಗೆ ಶಿವಮೊಗ್ಗ ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದೆ. ಇದಕ್ಕೆ ಮೂಲ ಕಾರಣ ಬಾಕ್ಸ್ ಚರಂಡಿಗಳು ಸರಿಯಾಗಿ ಇಲ್ಲದಿರುವುದೇ ಕಾರಣವಾಗಿದೆ. ಇಲ್ಲಿ ಪ್ರತಿಷ್ಟಿತರೇ ವಾಸವಾಗಿದ್ದಾರೆ. ಆದರೆ ಬಾಕ್ಸ್ ಚರಂಡಿಗಳನ್ನು ಸರಿಯಾಗಿ ಮಾಡಿಸಬೇಕಾದ ಮಹಾನಗರ ಪಾಲಿಕೆಯ ಈ ವಾರ್ಡ್ ನ ...
Read More »ಜಿಲ್ಲೆಯಾದ್ಯಂತ ನಾಳೆಯಿಂದ ಅರ್ಧ ದಿನ ಲಾಕ್ ಡೌನ್ : ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ಮಹಾಮಾರಿ ಕರೋನಾ ವೈರಸ್ ಹರಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನಿಂದ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ದೆಗಳ ಜೊತೆ ಚರ್ಚಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ...
Read More »ಅಧಿಕಾರಿಗಳು ಹಾಗೂ ಸಿಬ್ಬಂದಿ ದಿವ್ಯ ನಿರ್ಲಕ್ಷ ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಶವಕ್ಕೆ ಅಪೂರ್ಣ ಅಂತ್ಯಕ್ರಿಯೆ..
ಶಿವಮೊಗ್ಗ : ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಿದ್ಧವಾಗಿದ್ದು ಆದರೆ ಇದನ್ನು ಸ್ಥಳೀಯರು ವಿರೋಧಿಸಿದರು. ಸ್ಥಳೀಯರ ವಿರೋಧದ ನಡುವೆಯೇ ನೆನ್ನೆ ರಾತ್ರಿ ಅಂತ್ಯಸಂಸ್ಕಾರವನ್ನು ನಡೆಸಿದ್ದಾರೆ ಆದರೆ ಇದನ್ನು ಸಹ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ನಿರ್ಲಕ್ಷದಿಂದ ನಡೆಸಿದ್ದಾರೆ. ಅಪೂರ್ಣ ಅಂತ್ಯಸಂಸ್ಕಾರ ನಡೆಸಿ ಶವದ ಮೇಲೆ ಕಟ್ಟಿಗೆಗಳನ್ನು ಇಟ್ಟು ಹೋಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ...
Read More »
Recent Comments