Breaking News

Tag Archives: Shivamogga

ಜುಲೈ 13 ರಿಂದ ಅಗಸ್ಟ್ 13ರವರೆಗೆ ಗಾಂಧಿಬಜಾರ್ ನಲ್ಲಿ ಸ್ವಯಂ ಪ್ರೇರಿತ ಬಂದ್

  ಶಿವಮೊಗ್ಗ : ಮಹಾಮಾರಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 13 ರಿಂದ ಆಗಸ್ಟ್ 12 ರವರೆಗೆ ಅರ್ಧ ದಿನ ವ್ಯಾಪಾರ ಮಾಡಲು ನಿರ್ಧರಿಸಲಾಗಿದೆ. ಬೆಳ್ಳಿಗೆ 8 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದ್ದು, 3 ಗಂಟೆಯ ನಂತರ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದಾರೆ. ಪುಟ್ ಬಾತ್ ನಲ್ಲಿ ವ್ಯಾಪಾರ ಮಾಡುವುದು ಹಾಗೂ ...

Read More »

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವ ಪೊಲೀಸರ ವಶಕ್ಕೆ.

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಶ್ರೀ ಚನ್ನಬಸವೇಶ್ವರ ದೇವಾಲದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದವನನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ನಿನ್ನೆ ತಡರಾತ್ರಿ ದೇವಾಲಯದ ಮುಂದಿನ ಬಾಗಿಲ ಗ್ರಿಲ್ ಮುರಿದು ನಾಲ್ವರು ಕಳ್ಳರು ದೇವಾಲಯದ ಒಳಗೆ ನುಗ್ಗಿದ್ದಾರೆ. ಇದನ್ನು ಗಮನಿಸಿದ ದೇವಾಲಯದ ಅರ್ಚಕ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದಾರೆ. ಕೂಡಲೇ‌ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನಾಲ್ವರು ಕಳ್ಳರನ್ನು ಹಿಡಿಯಲು ಹೋಗಿದ್ದಾರೆ. ಆಗ ಮೂವರು ಕಳ್ಳರು ತಪ್ಪಿಸಿಕೊಂಡಿದ್ದು, ಓರ್ವ ಮಾತ್ರ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ...

Read More »

ಇಂದಿನಿಂದ ಸಂಜೆ 6ಗಂಟೆ ಬಳಿಕ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತ 

  ಶಿವಮೊಗ್ಗ : ಶಿವಮೊಗ್ಗದಲ್ಲಿ ಕರೋನಾ ನಿಯಂತ್ರಣದ ಕ್ರಮವಾಗಿ ಸಂಜೆ 6ಗಂಟೆ ಬಳಿಕ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಇತರ ವ್ಯಾಪಾರ ವಹಿವಾಟುಗಳನ್ನು ಇಂದಿನಿಂದ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು 6ಗಂಟೆಯ ಬಳಿಕ ರಸ್ತೆಗೆ ಇಳಿಯಬಾರದು. ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ...

Read More »

ಸೇವಾ ಸಿಂಧು ಯೋಜನೆಯಡಿ ವಿವಿಧ ಇಲಾಖೆಗಳ 451ಸೇವೆಗಳು ಲಭ್ಯ: ಜಿ.ಅನುರಾಧ

  ಶಿವಮೊಗ್ಗ  : ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು. ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್‍ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್‍ಸೈಟ್ ಮೂಲಕ ಅಥವಾ ಸಮೀಪದ ಸಿಎಸ್‍ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್‍ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ...

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ

  ಶಿವಮೊಗ್ಗ : ಎಸ್‍ಎಸ್‍ಎಲ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಚಿವ ಕೆ.ಎಸ್.ಈಶ್ವರಪ್ಪ  ಪರಿಶೀಲನೆ ನಡೆಸಿದರು.  ಕಸೂರ್ಬಾ ಬಾಲಕಿಯರ ಪ್ರೌಢಶಾಲೆ ಮತ್ತು ಮೈನ್ ಮಿಡ್ಲ್ ಸ್ಕೂಲ್‍ಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಹಜವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯಲ್ಲಿ 24904 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 84 ಪರೀಕ್ಷಾ ಕೇಂದ್ರಗಳಿವೆ. ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿವಿಧ ರೂಟ್‍ಗಳಲ್ಲಿ 198 ...

Read More »

ಇಂದು ಶಿವಮೊಗ್ಗದಲ್ಲಿ ಹತ್ತು ಕರೋನಾ ಪ್ರಕರಣ ಪತ್ತೆ, ಸ್ವಾಮೀಜಿಗೂ ಬಿಡದೆ ಕಾಡಿದ ಕರೋನಾ.

  ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮಠದ ಸ್ವಾಮೀಜಿ ಸೇರಿದಂತೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದಿದ್ದ ಎಂಟು ಜನರಲ್ಲಿ ಕಿಲ್ಲರ್ ಕರೋನಾ ವೈರಸ್ ಕಾಣಿಸಿಕೊಂಡಿದೆ. ಇದಲ್ಲದೆ ಇನ್ನೋರ್ವ ವ್ಯಕ್ತಿಯಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರು ತೀವ್ರ ಉಸಿರಾಟದ ತೊಂದರೆ(SARI) ಅನುಭವಿಸುತ್ತಿದ್ದಾರೆ. 25 ವರ್ಷದ ಮಹಿಳೆಯಲ್ಲಿಯೂ ಕರೋನಾ ಕಾಣಿಸಿಕೊಂಡಿದ್ದು, ಇವರಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂದು ಜಿಲ್ಲಾಡಳಿತ ಪತ್ತೆಹಚ್ಚಲಾರಂಭಿಸಿದೆ. ಸ್ವಾಮೀಜಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂಬುದು ಜಿಲ್ಲಾಡಳಿತಕ್ಕೆ ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ. ಇಂದು ಕರೋನಾ ಸೋಂಕಿಗೆ ತುತ್ತಾದ ...

Read More »

ಚರಂಡಿ ಹೂಳು ತೆಗೆಯುವ ಕಾರ್ಯ ಬೇಗನೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲಾ ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ಸ್ವಚ್ಛತಾ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಳೆಗಾಲದ ಪೂರ್ವಸಿದ್ಧತೆ ಪರೀಶೀಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಸೂಚನೆಗಳನ್ನು ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಚರಂಡಿ ತುಂಬಿ ಯಾವುದೇ ಕಾರಣಕ್ಕೂ ನೀರು ಹೊರಗೆ ಹರಿಯುವ ಪರಿಸ್ಥಿತಿ ಎಲ್ಲಿಯೂ ಕಾಣಿಸಬಾರದು. ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಕೃತಕ ನೆರೆ ಸೃಷ್ಟಿಯಾದರೆ ಸಂಬಂಧಪಟ್ಟ ...

Read More »

ಜೂನ್ 1ರಿಂದ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ-ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂನ್ 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶುಕ್ರವಾರ ಶಿವಮೊಗ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಧ್ಯ ಕೇವಲ ಒಂದು ರೈಲು ಮಾತ್ರ ಸೇವೆ ಆರಂಭಿಸಲಿದೆ. ಜೂನ್ 1ರಂದು ಸಂಜೆ 5.30ಕ್ಕೆ ಬೆಂಗಳೂರಿನಿಂದ ಹಾಗೂ ಜೂನ್ 2ರಂದು ಬೆಳಿಗ್ಗೆ 5.30ಕ್ಕೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ಕೇವಲ ಆನ್‍ಲೈನ್‍ನಲ್ಲಿ ಮಾತ್ರ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶವಿದೆ. ...

Read More »

ಜಿಲ್ಲೆಯಲ್ಲಿ ಮತ್ತೆ 10 ಕರೋನಾ ಪ್ರಕರಣಗಳು. ಸೊಂಕಿತರ ಸಂಖ್ಯೆ 24 ಕ್ಕೆ ಏರಿಕೆ.

  ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಮತ್ತೆ 10 ಕರೋನಾ ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 26ಕ್ಕೇರಿದೆ. ಬಾಂಬೆ, ತಮಿಳುನಾಡು ಹಾಗೂ‌ ಕೇರಳದಿಂದ ಬಂದವರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿದ್ದ‌ 10 ಜನರಲ್ಲಿ ಕರೋನಾ ದೃಢಪಟ್ಟಿದ್ದು, ಇನ್ನೂ 143 ಜನರ ವೈದ್ಯಕೀಯ ವರದಿ ಬರಬೇಕಿದೆ. ಅಲ್ಲದೆ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

Read More »

ಹೊರ ರಾಜ್ಯಗಳಿಂದ ಆಗಮಿಸಿದ್ದ 1428 ಮಂದಿಗೆ ಸಾಂಸ್ಥಿಕ ಕ್ವಾರೆಂಟೈನ್:ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಬೇರೆ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೆ ಆಗಮಿಸಿರುವ 1428ಮಂದಿಯನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ ಪೈಕಿ 802 ಮಂದಿಯ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದ್ದು, 14ಪಾಸಿಟಿವ್ ಬಂದಿವೆ. ಇನ್ನುಳಿದವರ ಪರೀಕ್ಷೆಯನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಇದುವರೆಗೆ ಒಟ್ಟು 4554 ಸ್ಯಾಂಪಲ್‍ಗಳ ಪರೀಕ್ಷೆ ನಡೆಸಲಾಗಿದ್ದು, 4349 ವರದಿ ಬಂದಿವೆ. ಇನ್ನೂ 191 ಸ್ಯಾಂಪಲ್‍ಗಳ ವರದಿ ಬರಬೇಕಿದೆ ಎಂದು ಹೇಳಿದರು. ಕ್ವಾರೆಂಟೈನ್ ವ್ಯವಸ್ಥೆ: ಪ್ರಸ್ತುತ 916ಮಂದಿ ಸಾಂಸ್ಥಿಕ ಕ್ವಾರೆಂಟೈನ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments