Breaking News

Tag Archives: ಕರೋನಾ ವೈರಸ್

ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಸಚಿವರ ಭೇಟಿ. ಕರೋನಾ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕರೋನ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಮೂರು ಶಂಕಿತ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿವೆ. ಜಿಲ್ಲೆಯಲ್ಲಿ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಮ್ಸ್‍ನಲ್ಲಿ 30 ಹಾಸಿಗೆಯ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದ್ದು, ವೈದ್ಯಾಧಿಕಾರಿಗಳ ತಂಡ ದಿನದ 24ಗಂಟೆ ಕಾರ್ಯನಿರ್ವಹಿಸುತ್ತಿದೆ ...

Read More »

ಜಿಲ್ಲೆಯಲ್ಲಿ ಕರೋನಾ ವೈರಸ್ ಪತ್ತೆಯಾಗಿಲ್ಲ , ಡಿಎಚ್‍ಒ ಸ್ಪಷ್ಟೀಕರಣ

  ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ಮಕ್ಕಾದಿಂದ ಬೆಂಗಳೂರಿಗೆ ವಾಪಾಸಾಗಿ ಅಲ್ಲಿಂದ ಶಿವಮೊಗ್ಗ ನಗರಕ್ಕೆ ಬಂದಿರುತ್ತಾರೆ. ಇವರು ಬಹಳ ವರ್ಷಗಳಿಂದ ಉಸಿರಾಟ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದು, ವೈದ್ಯರ ಸಲಹೆ ಮೇರೆಗೆ ಮಣಿಪಾಲ ಕೆಎಂಸಿ ...

Read More »

ಕರೋನಾ ವೈರಸ್ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು: ಎಂ.ಎಲ್.ವೈಶಾಲಿ

  ಶಿವಮೊಗ್ಗ : ಕರೋನಾ ವೈರಸ್ ನಿರ್ವಹಣೆಯಲ್ಲಿ ಎಲ್ಲಾ ಇಲಾಖೆಗಳು ಹಾಗೂ ಸಮನ್ವಯದಿಂದ ಏಕರೂಪದ ನಿರ್ವಹಣಾ ವ್ಯವಸ್ಥೆ (ಎಸ್‍ಒಎಸ್) ಪ್ರಕಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೋನಾ ವೈರಸ್ ನಿರ್ವಹಣೆ ಕುರಿತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ಪ್ರಯೋಗಾಲಯವನ್ನು ಪ್ರಾರಂಭಿಸಲಾಗಿದೆ. ಕರೋನಾ ವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವೃತ್ತಿಪರತೆಯನ್ನು ಕಾಯ್ದುಕೊಳ್ಳಬೇಕು. ಅನಗತ್ಯ ಗೊಂದಲಗಳಿಗೆ ಆಸ್ಪದವಾಗದಂತೆ, ವದಂತಿಗಳು ಹರಡಲು ...

Read More »