Tag Archives: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕರೋನಾ ವೈರಸ್ ತುರ್ತುಪರಿಸ್ಥಿತಿಯನ್ನು ಎದುರಿಸಲು ಮೆಗ್ಗಾನ್ ಆಸ್ಪತ್ರೆ ಸಜ್ಜು – ಜಿಲ್ಲಾಧಿಕಾರಿ

ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕರೋನಾ ವೈರಸ್ ಚಿಕಿತ್ಸೆಗಾಗಿ ಮೀಸಲಾಗಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತುಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್‍ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್‍ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೊರ ರೋಗಿ ಸೇವೆ ಸ್ಥಗಿತ ಬೇಡ: ಖಾಸಗಿ ಆಸ್ಪತ್ರೆಗಳಲ್ಲಿ ...

Read More »

3 ದಿನಗಳ ಕಾಲ ನಡೆಯಲಿರುವ ಪೋಲಿಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆ – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಇಂದು ಪೊಲೀಸ್ ಇಲಾಖೆಯು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 3 ದಿನಗಳ ಕಾಲ ನಡೆಯ ಲಿರುವ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದರು. ಪೊಲೀಸರು ತಮ್ಮ ವೃತ್ತಿ ಬದುಕಿನಲ್ಲಿ ಶಿಸ್ತು ರೂಢಿಸಿಕೊಂಡು ಸದಾ ಜಾಗೃತವಾಗಿರಬೇಕು. ತಮ್ಮ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದರ ಜೊತೆಗೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲರೂ ವಿಜಯಿಗಳಾಗುವುದು ಸಾಧ್ಯವಿಲ್ಲದಿರಬಹುದು. ಆದರೆ ಗೆಲ್ಲುವ ಪ್ರಯತ್ನದಿಂದ ಹಿಂದೆ ಸರಿಯಬಾರದು. ಕ್ರೀಡೆಯಲ್ಲಿ ಸ್ಪರ್ಧಾಭಾವನೆ ಬಹುಮುಖ್ಯ. ಎಲ್ಲಾ ಸಂಘಟಿತವಾದ ಪ್ರಯತ್ನಕ್ಕೆ ಜಯ ಖಂಡಿತ ಲಭಿಸುತ್ತದೆ ಎಂದರು. ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ.ಶಾಂತರಾಜು, ...

Read More »

ಸ್ಮಾರ್ಟ್ ಸಿಟಿ ಕಾಮಗಾರಿ ತ್ವರಿತ ಅನುಷ್ಟಾನಕ್ಕೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ 945ಕೋಟಿ ರೂ. ಮೊತ್ತದ ಅಂದಾಜಿನ 50ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದ್ದು, ಅನುಷ್ಟಾನ ಕಾರ್ಯ ಇನ್ನಷ್ಟು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಅತಿವೃಷ್ಟಿಯಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳೆದ ಕೆಲವು ತಿಂಗಳಿನಲ್ಲಿ ನಿರೀಕ್ಷಿತ ವೇಗದಲ್ಲಿ ನಡೆದಿರುವುದಿಲ್ಲ. ಇದೀಗ ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಅನುಷ್ಟಾನ ವೇಗ ಪಡೆದುಕೊಂಡಿದೆ. ಕಾಮಗಾರಿ ಅನುಷ್ಟಾನ ಇಲಾಖೆಗಳಾಗಿರುವ ಮೆಸ್ಕಾಂ, ನೀರು ...

Read More »

ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಪೆಂಡಾಲ್‍ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ...

Read More »