ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕರೋನಾ ವೈರಸ್ ಚಿಕಿತ್ಸೆಗಾಗಿ ಮೀಸಲಾಗಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತುಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್‍ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್‍ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೊರ ರೋಗಿ ಸೇವೆ ಸ್ಥಗಿತ ಬೇಡ: ಖಾಸಗಿ ಆಸ್ಪತ್ರೆಗಳಲ್ಲಿ ...
Read More »Tag Archives: ಮೆಗ್ಗಾನ್ ಆಸ್ಪತ್ರೆ
ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.
ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು..
Read More »ಮೆಗ್ಗಾನ್ ಆಸ್ಪತ್ರೆ ವ್ಯವಸ್ಥೆ ಸುಧಾರಿಸಲು ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಅವರು ಮಂಗಳವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೆಗ್ಗಾನ್ ಆಸ್ಪತ್ರೆಯ ಕುಂದುಕೊರತೆ ಹಾಗೂ ಲೋಪ ದೋಷಗಳ ಬಗ್ಗೆ ನಿರಂತರ ದೂರುಗಳು ಬರುತ್ತಿದ್ದು, ಇದನ್ನು ಸರಿಪಡಿಸಬೇಕು ಎಂದು ಹೇಳಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಬಹುತೇಕ ಔಷಧಿಗಳಿಗೆ ಚೀಟಿ ಬರೆದುಕೊಡಲಾಗುತ್ತಿದೆ. ಸಿರಿಂಜಿ, ಬ್ಯಾಂಡೇಜ್ ಸೇರಿದಂತೆ ಸಣ್ಣಪುಟ್ಟ ಸಾಮಾಗ್ರಿಗಳನ್ನು ಸಹ ಹೊರಗಿನಿಂದ ಖರೀದಿಸಿ ತರುವಂತೆ ರೋಗಿಗಳಿಗೆ ...
Read More »ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬುಧವಾರ ಸಂಜೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆಯ ಬಗ್ಗೆ, ಇಲ್ಲಿನ ವೈದ್ಯರ ಬಗ್ಗೆ ದಿನನಿತ್ಯ ನಿರಂತರ ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.. Contact for Advertisement : 7676236690
Read More »
Recent Comments