Breaking News

Tag Archives: ಸಹಜ ಸ್ದಿತಿಯತ್ತ ಶಿವಮೊಗ್ಗ: ಆದ್ರೂ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿರುವ ಜನ

ಸಹಜ ಸ್ದಿತಿಯತ್ತ ಶಿವಮೊಗ್ಗ: ಆದ್ರೂ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿರುವ ಜನ

ಶಿವಮೊಗ್ಗ : ನಿನ್ನೆ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದರಿಂದ ಆರಂಭಗೊಂಡಿರುವ ಗಲಾಟೆಯನ್ನು ನಿಯಂತ್ರಣ ಮಾಡಲು ಪೋಲಿಸರು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿದ್ದರು. ಈ ಕಾರಣದಿಂದಾಗಿ ಇಂದು ಬೆಳಗ್ಗೆಯಿಂದಲೇ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳಿದೆ. ಆದರೆ ನಿನ್ನೆಯ ಗಲಭೆಯಿಂದ ಭಯಭೀತರಾಗಿರುವ ಜನತೆ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಶಿವಮೊಗ್ಗದ ಬಹುತೇಕ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದ ಎಲ್ಲ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಲಾಗಿದೆ. ಆದರೆ ಹಾಲಿನ ಅಂಗಡಿಗಳು ಹಾಗೂ ಮೆಡಿಕಲ್ ಶಾಪ್ ಗಳನ್ನು ...

Read More »