Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿದೆ. ಆದರೆ ಇದು ಬರಿ ವದಂತಿ ಮಾತ್ರ, ಬಿ.ಎಸ್ ಯಡಿಯೂರಪ್ಪನವರು ಮಾಸ್ ಲೀಡರ್. ತಮ್ಮ ಆಡಳಿತದಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಎಲ್ಲಿಯೂ ಚ್ಯುತಿ ಬರದಂತೆ ನಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬದಲಾವಣೆಯ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರೇಗೌಡ ಅವರು ತಿಳಿಸಿದ್ದಾರೆ. ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗಿನಿಂದಲೂ ಅನೇಕ ಜನಪರ ಕಾರ್ಯಕ್ರಮಗಳನ್ನು ...
Read More »Tag Archives: B S yaduvurappa
ಅನ್ ಲಾಕ್ 3.0 : ವಿಕೆಡ್ ಕರ್ಫ್ಯೂ ರದ್ದು, ಮಾಲ್ ಗಳು ಓಪನ್.
Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಜುಲೈ 5 ರಿಂದ 19ರವರೆಗೆ ಮೂರನೇ ಹಂತದ ಅನ್ ಲಾಕ್ ಜಾರಿಯಲ್ಲಿರುತ್ತದೆ. ರಾಜ್ಯದ್ಯಂತ ವಿಧಿಸಿದ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದ್ದು ಬೆಳಿಗ್ಗೆ 5 ರಿಂದ ಸಂಜೆ 9 ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಇಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ನಿರ್ಧಾರವನ್ನು ...
Read More »ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ ನಿರೀಕ್ಷೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು ...
Read More »ಏಳು ತಿಂಗಳ ಬಳಿಕ ತವರಿಗೆ ಆಗಮಿಸಿದ ಸಿ.ಎಂ
ಶಿವಮೊಗ್ಗ: ಬರೋಬ್ಬರಿ ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತನ್ನ ತವರು ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಶಿಕಾರಿಪುರಕ್ಕೆ ಸಿಎಂ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿದೆ. ಕೂಡಲೇ ಮಳೆ ನಿಂತು ಪ್ರವಾಹ ತಗ್ಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕೊಡುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತರ ನೆರವಿಗೆ ಶಕ್ತಿಮೀರಿ ಕೆಲಸ ಮಾಡುತ್ತೇವೆ ಎಂದು ...
Read More »ಸಿಗಂದೂರಲ್ಲಿ ನಡೆದ ಘಟನೆ ಶೋಭೆ ತರುವಂತದ್ದಲ್ಲ – ಸಿಎಂ
ಶಿವಮೊಗ್ಗ: ಸಿಗಂದೂರಿನಲ್ಲಿ ಎರಡು ದಿನದ ಹಿಂದೆ ನಡೆದಿರುವ ಘಟನೆ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಜಿಲ್ಲಾಧಿಕಾರಿ ಸಿಗಂದೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಯಿಂದ ಸಿಗಂದೂರು ದೇವಾಲಯದ ಘಟನೆ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಜೊತೆಗೆ ದೇವಾಲಯದ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದರು.
Read More »ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಗೆಲುವು: ಯಡಿಯೂರಪ್ಪ
ಶಿವಮೊಗ್ಗ: ಶಿರಾ ಹಾಗೂ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಗೆ ಉತ್ತಮ ವಾತಾವರಣವಿದೆ. ಮತದಾರರು ಬಿಜೆಪಿ ಪರವಾಗಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಠೇವಣಿಯನ್ನು ಪಡೆಯಲು ಸಾಧ್ಯವಿಲ್ಲ ಎಂದುಕೊಂಡಿದ್ದೆವು. ಆದರೆ ಇದೀಗ ಶಿರಾ ಕ್ಷೇತ್ರದಲ್ಲಿಯೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ. ಕಳೆದ ಮೂರು ದಿನದಿಂದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
Read More »ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ
ಆನವಟ್ಟಿ : ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಸುಮಾರು 600ಕೋಟಿ ವೆಚ್ಚದ ಸೊರಬ ತಾಲೂಕಿನ ಮೂಡಿ-ಮೂಗೂರು ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಮಾದರಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಅಧಿಕಾರ ಸ್ವೀಕರಿಸಿದ ಅತ್ಯಲ್ಪ ಅವಧಿಯಲ್ಲಿ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳು ...
Read More »ಬಿ ಎಸ್ ಯಡಿಯೂರಪ್ಪನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರೇರಣ ಎಜುಕೇಷನ್ ಮತ್ತು ಸೋಶಿಯಲ್ ಟ್ರಸ್ಟ್ ಹಾಗೂ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ವೀರೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳ್ಳಿಗೆ 9 ಗಂಟೆಗೆ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಎಲ್ಲರಿಗೂ ವೈದ್ಯರ ಸಲಹೆ ಮೇರೆಗೆ ಸಾಮನ್ಯ ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತದೆ.. ಆಯುಷ್ ಭಾರತದ ಯೋಜನೆಯಡಿಯಲ್ಲಿ ಆರೋಗ್ಯ ಕಾಡ್ ಗಳನ್ನು ಈಗಾಗಲೇ ವಿತರಿಸುವಂತಹ ಕಾರ್ಯ ನಡೆದಿದೆ. ಯಾರಿಗೆ ಈ ಕಾರ್ಡ್ ದೊರೆತಿಲ್ಲವೋ ಅಂತವರಿಗೆ ಫೆಬ್ರವರಿ 27, ...
Read More »ಮಂಗಳೂರು ಘಟನೆ -ಸಿಓಡಿ ತನಿಖೆಗೆ ಆದೇಶ
ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ ಘಟನೆಯನ್ನು ನ್ಯಾಯಾಂಗ ಮತ್ತು ಸಿಓಡಿ ತನಿಖೆಗೆ ವಹಿಸಲು ಆದೇಶಿಸ ಲಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹೆಲಿಪ್ಯಾಡ್‌ನಲ್ಲಿ ಇಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬಂದವರು ಪ್ರತಿಭಟನೆ ನೆಪದಲ್ಲಿ ಹಿಂಸಾಚಾರ ನಡೆಸಿ ಗಲಭೆಗೆ ಕಾರಣರಾಗಿದ್ದಾರೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಿಳಿದು ಕೊಳ್ಳುವ ಪ್ರಯತ್ನ ಮಾಡದೇ ಹಿಂಸಾಚಾರನಡೆಸಲಾಗಿದೆಎಂದುದೂರಿದರು. ಸಾವಯವ ಕೃಷಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ಉತ್ತೇಜನಕ್ಕಾಗಿ ಹಲವು ಯೋಜನೆ ಕೈಗೊಳ್ಳಲಾಗಿದೆ. ಪೊಲೀಸರ ವೇತನ ಭತ್ಯೆ ಹೆಚ್ಚಳಕ್ಕೆ ...
Read More »ಅನರ್ಹರಿಗೆ ಟಿಕೆಟ್ ಖಚಿತ
ಶಿವಮೊಗ್ಗ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶಿಕಾರಿಪುರದಲ್ಲಿ ಈ ಕುರಿತು ಹೇಳಿಕೆ ನೀಡಿರುವ ಸಿಎಂ ಈ ಕುರಿತು ಅಮಿತ್ ಷಾ ಸೇರಿದಂತೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದೇನೆ. ಇದಕ್ಕೆ ವರಿಷ್ಟರೂ ಒಪ್ಪಿಗೆ ಸೂಚಿಸಿದ್ದಾರೆ. ಅನರ್ಹ ಶಾಸಕರನ್ನು ಗೆಲ್ಲಿಸಬೇಕಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಎಲ್ಲ ನಾಯಕರ ಮೇಲಿದೆ. ಇದಕ್ಕಾಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಇಬ್ಬಿಬ್ಬರು ಉಸ್ತುವಾರಿಗಳನ್ನು ಈಗಾಗಲೇ ನೇಮಿಸಲಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಸಂಬಂಧ ...
Read More »
Recent Comments