Cnewstv.in / Shivamogga / 27.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರೇರಣ ಎಜುಕೇಶನ್ ಟ್ರಸ್ಟ್ ವತಿಯಿಂದ ಸೇವಾಭಾರತಿ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ಸಾವಿರ ಫುಡ್ ಕಿಟ್ ಗಳನ್ಜು ಹಂಚಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷರಾದ ಸಂಸದರಾದ ಬಿ.ವೈ. ರಾಘವೇಂದ್ರ ತಿಳಿಸಿದರು. ದಿನ ಕೂಲಿಕಾರ್ಮಿಕರು ದಿನನಿತ್ಯ ದುಡಿದು ಉಣ್ಣುವ ಕುಟುಂಬಗಳು ದಿನಗೂಲಿ ಕೆಲಸ ಮಾಡುತ್ತಾ ಇರುವವರು ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಅಂಥವರನ್ನು ಗುರುತಿಸಿ ಫುಡ್ ಕಿಟ್ ನೀಡಲಾಗುತ್ತದೆ. ರಾಗಿ, ಗೋಧಿಹಿಟ್ಟು, ...
Read More »Tag Archives: B Y Ragavendra
ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯ 271ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್‍ಗೆ ತಲಾ 20ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್‍ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ...
Read More »ಶಿವಮೊಗ್ಗ ಮೆಡಿಕಲ್ ಕಾಲೇಜು ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಇಂದು ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ 133 ಸಿ ದರ್ಜೆ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ನಿಯಮಾವಳಿಯನ್ನು ನೇಮಕಾತಿಯಲ್ಲಿ ಪಾಲಿಸಬೇಕು. ಉಳಿದ ಖಾಯಂ ಹುದ್ದೆಗಳ ನೇಮಕಾತಿಗಾಗಿ ಆದಷ್ಟು ಬೇಗನೆ ಇಲಾಖೆಯ ನೇಮಕಾತಿ ಮತ್ತು ವೃಂದ ನಿಯಮಾವಳಿಯನ್ನು ರಚಿಸುವಂತೆ ...
Read More »ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ
ಆನವಟ್ಟಿ : ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಸುಮಾರು 600ಕೋಟಿ ವೆಚ್ಚದ ಸೊರಬ ತಾಲೂಕಿನ ಮೂಡಿ-ಮೂಗೂರು ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಮಾದರಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಅಧಿಕಾರ ಸ್ವೀಕರಿಸಿದ ಅತ್ಯಲ್ಪ ಅವಧಿಯಲ್ಲಿ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳು ...
Read More »ಬಿ ಎಸ್ ಯಡಿಯೂರಪ್ಪನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರೇರಣ ಎಜುಕೇಷನ್ ಮತ್ತು ಸೋಶಿಯಲ್ ಟ್ರಸ್ಟ್ ಹಾಗೂ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ವೀರೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳ್ಳಿಗೆ 9 ಗಂಟೆಗೆ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಎಲ್ಲರಿಗೂ ವೈದ್ಯರ ಸಲಹೆ ಮೇರೆಗೆ ಸಾಮನ್ಯ ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತದೆ.. ಆಯುಷ್ ಭಾರತದ ಯೋಜನೆಯಡಿಯಲ್ಲಿ ಆರೋಗ್ಯ ಕಾಡ್ ಗಳನ್ನು ಈಗಾಗಲೇ ವಿತರಿಸುವಂತಹ ಕಾರ್ಯ ನಡೆದಿದೆ. ಯಾರಿಗೆ ಈ ಕಾರ್ಡ್ ದೊರೆತಿಲ್ಲವೋ ಅಂತವರಿಗೆ ಫೆಬ್ರವರಿ 27, ...
Read More »ಆಯುಷ್ಮಾನ್ ಭಾರತ ಜಾಥಾಗೆ ಚಾಲನೆ
ಶಿವಮೊಗ್ಗ: ಆಯುಷ್ಮಾನ್ ಭಾರತ ಪಾಕ್ಷಿಕ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಇಂದು ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೂ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನಸಾಮನ್ಯರಿಗೆ ತಲುಪುವಂತೆ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ...
Read More »ಸರ್ಕಾರದಲ್ಲಿ ಸಿಎಂ ಪುತ್ರರ ಹಸ್ತಕ್ಷೇಪ ನಿರಾಕರಿಸಿದ ಬಿವೈಆರ್.
ಶಿವಮೊಗ್ಗ: ಸಿಎಂ ಯಡಿಯೂರಪ್ಪ ಅವರ ಸರ್ಕಾರದಲ್ಲಿ ತಮ್ಮ ಹಸ್ತಕ್ಷೇಪದ ಆರೋಪವನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನಿರಾಕರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರ ಪುತ್ರನಾದರೂ ನಾನೊಬ್ಬ ಜನಪ್ರತಿನಿಧಿ. ಹಾಗೆಯೇ ವಿಜಯೇಂದ್ರ ಬಿಜೆಪಿ ಕಾರ್ಯಕರ್ತನಾಗಿ ದ್ದರಿಂದ ಸಹಜವಾಗಿಯೇ ಜನರು ಕೆಲಸ ಅಪೇಕ್ಷಿಸಿ ಬರುತ್ತಾರೆ. ನಾವು ಕಾರ್ಯಕರ್ತರಾಗಿ ಕೆಲಸ ಮಾಡುತ್ತೇವೆ ಅಷ್ಟೇ…. ಅಷ್ಟೇ ಹೊರತು ಪಡಿಸಿ ಅಧಿಕಾರ ದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದರು. ಸುಪ್ರೀಂ ಕೋರ್ಟ್ ನಲ್ಲಿಂದು ಬಿಎಸ್ವೈ ಆಸ್ತಿ ದುಪ್ಪಟ್ಟು ಪ್ರಕರಣದ ಅರ್ಜಿ ವಿಚಾರಣೆ ವಿಚಾರ ನಡೆಯುತ್ತಿದ್ದು, ಕಾನೂನು ತನ್ನ ಕಾರ್ಯ ನಿರ್ವಹಿಸುತ್ತದೆ. ...
Read More »ಬಿ ವೈ ಅರ್ 223360 ಮತಗಳ ಅಂತರದಿಂದ ಭರ್ಜರಿ ಗೆಲುವು
ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ 2021 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 223360 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729872 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506517 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…
Read More »ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ
ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2020 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 222706 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729051 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506345 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…ಇನ್ನು ಅಂಚೆ ಮತಗಳ ಎಣಿಕೆ ಬಾಕಿ ಇದ್ದು ಗೆಲುವಿನ ಅಂತರ ಇನ್ನು ಹೆಚ್ಚಾಗುವ ಸಾದ್ಯತೆ ...
Read More »ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ ಚಲಾಯಿಸಿದರು. ...
Read More »
Recent Comments