Breaking News

Tag Archives: BREAKING NEWS

ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು

ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ- 18 ಲಕ್ಷ ರೂ. ಸಂಗ್ರಹ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ‌ ಚಂದ್ರಗುತ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ಯಶಸ್ವಿಯಾಗಿ ನಡೆಯಿತು. ದೇವಸ್ಥಾನದ ಜಾತ್ರೆ ಹಾಗೂ ಹುಣ್ಣಿಮೆಯಲ್ಲಿ ಭಕ್ತರ ಮೂಲಕ ಸಂಗ್ರಹವಾದ ಕಾಣಿಕೆ ಹಣದ ಎಣಿಕೆಯನ್ನು ಸೊರಬ ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ನೇತೃತ್ವದಲ್ಲಿ ನಡೆಸಲಾಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 18,18,480 ‌‌ರೂ. ಕಾಣಿಕೆ ಸಂಗ್ರವಾಗಿದೆ‌. ಇನ್ನು ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಸಹ ಆಳವಡಿಸಲಾಗಿತ್ತು. ಹುಂಡಿ ಎಣಿಕೆ ಕಾರ್ಯದಲ್ಲಿ ...

Read More »