Breaking News

Tag Archives: Corona

DCM ಅಶ್ವತ್ಥನಾರಾಯಣ : ನಾಳೆಯಿಂದ ದಿನಕ್ಕೆ 20000 ರೆಮಿಡಿಸಿವರ್ ಡೋಸ್ ಪೂರೈಕೆ

  Cnewstv.in / Bangalore / Remdesivir injection / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039  ಬೆಂಗಳೂರು :  ಕೋವಿಡ್‌ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್‌ ಕೊರತೆ ನೀಗಿಸುವ ನಿಟ್ಟಿನಲ್ಲಿ ಇಂದಿನಿಂದ ದಿನಕ್ಕೆ 20,000 ರೆಮಿಡಿಸಿವರ್‌ ಡೋಸ್‌ಗಳನ್ನು ಪೂರೈಸಲು ನಾಲ್ಕು ಔಷಧ ಕಂಪನಿಗಳು ಒಪ್ಪಿಕೊಂಡಿವೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. ರೆಮಿಡಿಸಿವರ್‌ ಸೇರಿ ವಿವಿಧ ಔಷಧಗಳನ್ನು ಒದಗಿಸುತ್ತಿರುವ ನಾಲ್ಕು ಕಂಪನಿಗಳಾದ ಮೈಲಾನ್‌, ಸಿಪ್ಲಾ, ಜ್ಯುಬಿಲಿಯೆಂಟ್‌ ಹಾಗೂ ಸಿಂಜಿನ್‌ ಕಂಪನಿಗಳ ಮುಖ್ಯಸ್ಥರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಮುಂದಿನ ಐದು ...

Read More »

ಶಿವಮೊಗ್ಗ ನಗರದ 35 ವಾರ್ಡ್ ಗಳಿಗೆ ಸ್ಯಾನಿಟೈಜೇಷನ್

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೋವಿಡ್ ಸುರಕ್ಷಾಪಡೆ ಮತ್ತು ಸೇವಾ ಭಾರತಿ ಆಶ್ರಯದಲ್ಲಿ ಆಯೋಜಿಸಿದ್ದ ಸ್ಯಾನಿಟೈಜೇಷನ್ ಅಭಿಯಾನಕ್ಕೆ ಸಚಿವ ಕೆ.ಎಸ್.‌ ಈಶ್ವರಪ್ಪ ಸ್ವತಃ ಔಷಧಿ ‌ಸಿಂಪಡಿಸುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷ ಕೋವಿಡ್ ಸುರಕ್ಷಾಪಡೆ ವತಿಯಿಂದ ಎಲ್ಲ ನಾಗರಿಕರಿಗೆ ಉಚಿತವಾಗಿ ಆಯುಷ್‍ಕಿಟ್ ಕೊಡುವ ಮೂಲಕ ಕೊರೊನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಈ ಬಾರಿ ಇಡೀ ನಗರಕ್ಕೆ ಸ್ಯಾನಿಟೈಜ್ ಮಾಡಲಾಗುವುದು. ಇದಕ್ಕಾಗಿ ಆರು ವಾಹನಗಳು ಸಿದ್ಧವಾಗಿದ್ದು, ಪ್ರತಿ ವಾಹನ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 612. ಕೊರೊನಾಗೆ 15 ಜನ ಬಲಿ, 642 ಜನ ಡಿಸ್ಚಾರ್ಜ್..

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 612 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3489 ಸಕ್ರಿಯ ಪ್ರಕರಣಗಳಿವೆ. 2504 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1615 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 420 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 642 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 236 ಜನ ನಿಗದಿತ ...

Read More »

ಕೊರೊನಾ ಸೋಂಕಿತರ ಸಂಬಂಧಿಕರಿಂದ ಮೊಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039  ಶಿವಮೊಗ್ಗ : ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯೊಬ್ಬರ ಸಂಬಂಧಿಕರಿಗೆ ಪಿಪಿಇ ಕಿಟ್ ಧರಿಸಿ ವಾರ್ಡಿ ಒಳಗೆ ಪ್ರವೇಶ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಏಕಾಏಕಿ ಜೊತೆಗಿದ್ದ ಸಂಬಂಧಿಕರನ್ನು ವಾರ್ಡಿನಿಂದ ಹೊರಗೆ ಕಳುಹಿಸಿದ್ದಾರೆ. ಇದನ್ನ ಖಂಡಿಸಿದ್ದು ರೋಗಿಗಳ ಸಂಬಂಧಿಕರು ಪ್ರತಿಭಟನೆಯನ್ನು ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ, ಅರೈಕೆ ಮಾಡುವುದಿಲ್ಲ. ಸಂಬಂಧಿಕರೊಬ್ಬರು ಇದ್ದರೆ ಅವರಿಗೆ ಸರಿಯಾದ ಸಮಯಕ್ಕೆ ಮಾತ್ರೆ ಔಷಧಿಗಳನ್ನು ನೀಡಿ ಆರೈಕೆ ಮಾಡಬಹುದು. ಹಾಗಾಗಿ‌ ಸಂಬಂಧಿಕರೊಬ್ಬರನ್ನು ಒಳಗೆ ಬಿಡಿ ...

Read More »

ಶಿವಮೊಗ್ಗದಲ್ಲಿ ಜೀವರಕ್ಷಕ ಆಕ್ಸಿಜನ ಪರಿಸ್ಥಿತಿ ಹೇಗಿದೆ.? ಎಷ್ಟು ಜನ ಆಕ್ಸಿಜನ್ ಪಡೆದಿದ್ದಾರೆ ಗೊತ್ತಾ ??

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ 9916660399  ಶಿವಮೊಗ್ಗ: ಮೊದಲ ಅಲೆಯಲ್ಲಿ ಆಕ್ಸಿಜನ್ ಕೊರತೆ ಎದುರಾದಾಗ ಜಿಲ್ಲೆಯಲ್ಲಿ 19 ಕೆಎಲ್‌ಡಿ(ಕಿಲೋ ಪರ್ ಡೇ) ಘಟಕ ಸ್ಥಾಪಿಸಲಾಗಿದ್ದು ಜಿಲ್ಲೆಯಲ್ಲಿ ಅತಿ ಹೆಚ್ಚು ರೋಗಿಗಳು ದಾಖಲಾಗಿರುವ ಮೆಗ್ಗಾನ್ ಮೇಲಿನ ಒತ್ತಡವನ್ನು ಇದು ಕಡಿಮೆ ಮಾಡಿದೆ. 19 ಕೆಎಲ್‌ಡಿ ಸಾಮರ್ಥ್ಯದ ಘಟಕ ಹಾಗೂ 25 ಜಂಬೋ ಆಕ್ಸಿಜನ್, 25 ಮಿನಿ ಆಕ್ಸಿಜನ್ ಸಿಲಿಂಡರ್‌ಗಳ ದಾಸ್ತಾನು ಲಭ್ಯವಿದೆ. ಏಪ್ರಿಲ್ ತಿಂಗಳಲ್ಲಿ ಡಿ ಟೈಪ್ ಸಿಲಿಂಡರ್ ಬೇಡಿಕೆ ಹೆಚ್ಚಾಗಿದ್ದು ಮೊದಲನೇ ವಾರ 150 ಸಿಲಿಂಡರ್, 2ನೇ ವಾರ ...

Read More »

ಜಿಲ್ಲಾಡಳಿತದಿಂದ ಬಿಗಿ ಕ್ರಮ : ಕೊರೋನ ಪಾಸಿಟಿವ್ ಬಂದವರು ಖಾಸಗಿ ವಾಹನಗಳಲ್ಲಿ ಓಡಾಡುವಂತಿಲ್ಲ. ಮನೆ ಬಿಟ್ಟು ಹೊರ ಬರುವಂತಿಲ್ಲ.

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ನಿಯಂತ್ರಣಗಾಗಿ‌ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಖಾಸಗಿ ವಾಹನಗಳಲ್ಲಿ ಹೋಗುವಂತಿಲ್ಲ. ಒಂದು ವೇಳೆ ಖಾಸಗಿ ವಾಹನ ಬಳಕೆ ಮಾಡಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಪಾಸಿಟಿವ್ ವರದಿ ಬಂದ ತಕ್ಷಣ ಆಂಬುಲೆನ್ಸ್‍ನಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲಾಗುತ್ತದೆ. ಮೂರು ದಿನ ಅಲ್ಲಿರಬೇಕು. ಆರೋಗ್ಯ ಪರಿಶೀಲನೆ ಬಳಿಕ ಸುಧಾರಣೆ ಕಂಡು ಬಂದರೆ ಹೋಂ ಐಸೊಲೇಷನ್‍ಗೆ ಕಳುಹಿಸಲಾಗುತ್ತದೆ. ಇಲ್ಲದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ...

Read More »

ಕೋಟಿ ನಿರ್ಮಾಪಕ, ಕನಸಿನ ರಾಣಿ ನಟಿ ಮಾಲಾಶ್ರೀ ಪತಿ ರಾಮು ಇನ್ನಿಲ್ಲ!

ಬೆಂಗಳೂರು : ಕೋಟಿ ನಿರ್ಮಾಪಕ ಹಾಗೂ ಕನಸಿನ ರಾಣಿ ನಟಿ ಮಾಲಾಶ್ರೀ ಅವರ ಪತಿ ರಾಮು ಇಂದು ಕೊರೊನಾದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕಳೆದ ಶನಿವಾರ ದಾಖಲೆಯಾಗಿದ್ದರು. ಕಳೆದ ಒಂದು ವಾರದ ಹಿಂದೆ ಕೊರೊನಾ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸರಿ ಸುಮಾರು ಇಂದು 8 ಗಂಟೆ ಹೊತ್ತಿಗೆ ರಾಮು ನಿಧನರಾಗಿದ್ದಾರೆ. ಕನ್ನಡದ ಅನೇಕ ಸಿನಿಮಾಗಳನ್ನು ರಾಮು ನಿರ್ಮಾಣ ಮಾಡಿದ್ದರು. ಲಾಕಪ್ ಡೆತ್, AK-47, ಚಾಮುಂಡಿ, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ, ನಂಜುಂಡಿ, ಸೇರಿ ಅವರು ಹಲವು ಸಿನಿಮಾ ನಿರ್ಮಾಣ ...

Read More »

ಶಿವಮೊಗ್ಗದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್.

ಶಿವಮೊಗ್ಗ: ಕರೋನಾ ವಿರುದ್ಧ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದೆ. ಶಿವಮೊಗ್ಗದ ತುಂಗಾನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ತಲಾ 50 ಸಿಬ್ಬಂದಿಯನ್ನು ಇದಕ್ಕಾಗಿ ಆಯ್ಕೆ ಸಹ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಪ್ರಾಥಮಿಕ ಆರೋಗ್ಯ ...

Read More »

ಕೋವಿಡ್ 19 : ಖಾಸಗಿ ಆಸ್ಪತ್ರೆಗಳಲ್ಲಿಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಸೂಚನೆ.

  ಶಿವಮೊಗ್ಗ : ಖಾಸಗಿ ಆಸ್ಪತ್ರೆಗಳಲ್ಲಿ ಕರೋನಾ ರೋಗಿಗಳನ್ನು ದಾಖಲಿಸಿ ಯಾವುದೇ ಕುಂದುಕೊರತೆಯಾಗದಂತೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಇಂದು  ಜಿಲ್ಲಾಡಳಿತ ಸಭಾಂಗಣದಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಮಾತನಾಡಿದರು. ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜು, ನಾರಾಯಣ ಹೃದಯಾಲಯ, ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆಗಳಲ್ಲಿ ಕರೋನಾ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 600ಬೆಡ್‍ಗಳಿವೆ. ಇವುಗಳ ಪೈಕಿ ಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ...

Read More »

ಕೆಲವು ವಾರ್ಡ್‍ಗಳು ಪೂರ್ಣ ಸೀಲ್‍ಡೌನ್

  ಶಿವಮೊಗ್ಗ : ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ ಜಿಲ್ಲೆಯಾದ್ಯಂತ ಇಂದಿನಿಂದ ಲಾಕ್‍ಡೌನ್ ತೆರವುಗೊಳಿಸಲಾಗಿದ್ದು, ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5ರವರೆಗೆ ಮಾತ್ರ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿರುವ ಹಳೆ ಶಿವಮೊಗ್ಗ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಜುಲೈ 23ರ ಬೆಳಿಗ್ಗೆ 5ರಿಂದ ಜುಲೈ 29ರ ರಾತ್ರಿ 9ಗಂಟೆಯವರೆಗೆ ಸಂಪೂರ್ಣ ಸೀಲ್‍ಡೌನ್ ಇರಲಿದೆ ಎಂದು ಸ್ಪಷ್ಟಪಡಿಸಿದರು. ಹಳೆ ಶಿವಮೊಗ್ಗ ಕ್ಲಸ್ಟರ್‍ನಲ್ಲಿ ಬರುವ ವಾರ್ಡ್ ಸಂಖ್ಯೆ 22, 23, 29 ಮತ್ತು ...

Read More »