Breaking News

Tag Archives: Crime

ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು

ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರೌಡಿಶೀಟರ್ ಕಡೇಕಲ್ ಅಬೀದ್ ಕಾಲಿಗೆ ಪೊಲೀಸರ ಗುಂಡೇಟು- ಅರೆಸ್ಟ್

ಶಿವಮೊಗ್ಗ : ಶಿವಮೊಗ್ಗದ ಭದ್ರಾವತಿಯಲ್ಲಿ ಪೊಲೀಸರ ಗುಂಡಿನ ಸದ್ದು ಮತ್ತೊಮ್ಮೆ ಮೊಳಗಿದ್ದು, ರೌಡಿಶೀಟರ್ ಕಾಲಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ. ಶಿವಮೊಗ್ಗದ ಕಡೇಕಲ್ ಅಬೀದ್ (32) ಬಂಧಿತ ಆರೋಪಿ. ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ಕಾಲಿಗೆ ಭದ್ರಾವತಿಯಲ್ಲಿ ಗುಂಡು ಹಾರಿಸಲಾಗಿದೆ‌. ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಖಚಿತ ಮಾಹಿತಿ ಹಿನ್ನೆಲೆ ಪೇಪರ್ ಟೌನ್ ಇನ್ಸ್‌ಪೆಕ್ಟರ್‌ ...

Read More »

ಗಾಂಜಾ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್

ಶಿವಮೊಗ್ಗ: ನಗರದ ಸಾಗರ ರಸ್ತೆಯಲ್ಲಿ ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಗಾಂಜಾ ಇಟ್ಟು ಸಾಗಿಸುತ್ತಿದ್ದ 7 ಜನರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 1.217 ಕೆಜಿ ಒಣ ಗಾಂಜಾ ಮತ್ತು ಕಾರನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಆಜಾದ್ ನಗರದ ತನ್ವೀರ್ ಪಾಷಾ ಅಲಿಯಾಸ್ ಮಾರ್ಕೆಟ್ ಫೌಜಾನ್(26), ಮೊಹಮ್ಮದ್ ಇಬ್ರಾಹಿಂ @ ಮುನ್ನ(25), ಆರ್ ಎಂ ಎಲ್ ನಗರದ ಅಕೀಫ್ @ ಪುಕ್ಕಿ (28), ಮೊಹಮ್ಮದ್ ಫೈಜಲ್ @ ಬಚ್ಚಾ ಫೈಜಲ್ (21), ಇಲಿಯಾಜ್ ನಗರದ ಅರ್ಬಾಜ್ ಖಾನ್ @ ಮಜರ್ (26), ಟಿಪ್ಪು ನಗರದ ...

Read More »

ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವೀಲ್ಹಿಂಗ್ ಮಾಡಿದ ಸವಾರನೋರ್ವನಿಗೆ ಬರೋಬ್ಬರಿ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲ್ಹಿಂಗ್ ಮಾಡಿದ್ದು, ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಸಂಚಾರಿ ಪೊಲೀಸರು ನೋಟೀಸ್ ನೀಡಿದ್ದರು. ಇದೀಗ ಶಿವಮೊಗ್ಗ ಜಿಲ್ಲಾ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂದು 5 ಸಾವಿರ ದಂಡ ವಿಧಿಸಿ, ಆದೇಶಿಸಿದೆ.

Read More »

ಕೈ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ.

ಶಿವಮೊಗ್ಗ: ನವಜಾತ ಗಂಡು ಶಿಶುವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಗರದ ಶ್ರೀರಾಮಪುರದ 2ನೇ ಕ್ರಾಸ್ ನಲ್ಲಿ ಬೋರೆವಲ್ ಬಳಿ ಚೀಲದಲ್ಲಿ ಗಂಡು ಶಿಶುವನ್ನ ಬಿಟ್ಟು ಹೋಗಿದ್ದು, ಮಗು ಅಳುವುದನ್ನು ಕೇಳಿ ಇಂದು ಬೆಳಿಗ್ಗೆ ಸ್ಥಳೀಯರು ಚೀಲವನ್ನ ಪರೀಕ್ಷಿಸಿದ್ದಾರೆ. ಈ ವೇಳೆ ಚೀಲದಲ್ಲಿ ಮಗು ಇರುವುದನ್ನು ಗಮನಿಸಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಬರುವ ಮೊದಲೇ ಸ್ಥಳೀಯರು ಮಗುವಿನ ಆರೈಕೆ ಮಾಡಿದ್ದಾರೆ. ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ...

Read More »

ಸಿಡಿಮದ್ದು ಸ್ಫೋಟದಿಂದ ಬಾಲಕನಿಗೆ ಗಾಯ- ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ: ಪಟ್ಟಣದ ತುಂಗಾನದಿ ತೀರದಲ್ಲಿ ಸಿಡಿಮದ್ದು ಸ್ಫೋಟಗೊಂಡು, ಬಾಲಕನೋರ್ವ ಗಾಯಗೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ತೇಜು(9) ಸ್ಫೋಟದಿಂದ ಗಾಯಗೊಂಡ ಬಾಲಕ. ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿ ಪಟ್ಟಣದ ತುಂಗಾನದಿ ತೀರದಲ್ಲಿ ತೆಪ್ಪೋತ್ಸವ ಆಚರಣಾ ಸಮಿತಿಯು ಜನವರಿ 1 ರಂದು ತೆಪ್ಪೋತ್ಸವ ಆಯೋಜಿಸಿತ್ತು. ತೆಪ್ಪೋತ್ಸವ ಮುಗಿದ ನಂತರ ಎರಡೂವರೆ ಗಂಟೆ ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಸಹ ನಡೆಸಲಾಗಿತ್ತು. ಸಿಡಿಮದ್ದು ಪ್ರದರ್ಶನ ನಡೆದ ನಾಲ್ಕು ದಿನಗಳ ಬಳಿಕ ಜ.5 ರ ಭಾನುವಾರ ಸಂಜೆ ನದಿ ತೀರದಲ್ಲಿ ಸಿಡಿಯದೇ ಅರ್ಧಂಬರ್ಧ ಉಳಿದಿದ್ದ ಪಟಾಕಿಗಳನ್ನು 3 ಬಾಲಕರು ಒಟ್ಟುಗೂಡಿಸುವ ಪ್ರಯತ್ನದಲ್ಲಿದ್ದಾಗ ...

Read More »

ಧನಂಜಯ ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್: ಆರೋಪಿ ಬಂಧಿಸಿದ ಕೋಟೆ ಪೊಲೀಸರು.

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಭದ್ರಾವತಿ ಮೂಲದ ಸೌಹಾರ್ಧ ಪಟೇಲ್(26) ಬಂಧಿತ ಆರೋಪಿ. ಆರೋಪಿಯು ಈ ಹಿಂದೆ ಕಾನೂನು ಪದವಿ ಓದುವಾಗ ಎನ್ಇಎಸ್ ಕಾರ್ಯದರ್ಶಿ ನಾಗರಾಜ್ ಅವರು ವಿಷಯವೊಂದರ ಕುರಿತಾಗಿ ಆರೋಪಿಗೆ ಬೈಯ್ದಿದ್ದರು. ಈ ಹಿನ್ನೆಲೆಯಲ್ಲಿ ಮನ ನೊಂದಿದ್ದ ಆರೋಪಿ ಸೌಹಾರ್ದ ಪಟೇಲ್‌, ಕೊರಿಯರ್‌ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿಯನ್ನು ...

Read More »

ಕಾರು – ಬಸ್ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು

ಶಿವಮೊಗ್ಗ: ಬಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದ್ದು, ಮೃತರ ವಿವರ ...

Read More »

ತುಂಗಾ ಚಾನಲ್ ನಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ಶಿವಮೊಗ್ಗ: ಕಲ್ಲೂರು ಮಂಡ್ಲಿ ಸಮೀಪದ ಬಂಡೆ ಕಲ್ಲೂರು ತುಂಗಾ ಚಾನಲ್ ನಲ್ಲಿ ಈಜಲು ಹೋದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹಳೇ ಮಂಡ್ಲೀ ನಿವಾಸಿ ಮೋಹಿತ್(15) ಮೃತ ಬಾಲಕ. ಬುಧವಾರ ಸ್ನೇಹಿತರೊಂದಿಗೆ ಈಜಲು ಹೋದಾಗ ಚಾನಲ್ ನಲ್ಲಿ ಮೋಹಿತ್ ನಾಪತ್ತೆಯಾಗಿದ್ದ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು. ಬುಧವಾರ ಸಂಜೆಯಿಂದ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಸಂಜೆ ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆಯಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »