ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ‘ಅಂಜನಿ’ ಎಂಬ ಹೆಣ್ಣು ಹುಲಿ ಮೃತಪಟ್ಟಿದೆ. 17 ವರ್ಷ ವಯಸ್ಸಿನ ಹೆಣ್ಣು ಹುಲಿಯು ವಯೋ ಸಹಜವಾದ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃಗಾಲಯದಲ್ಲಿ ಮೃತಪಟ್ಟಿದೆ. ಪಶು ವೈದ್ಯಕೀಯ ಕಾಲೇಜಿನ ಪಶುವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. 2022 ರಲ್ಲಿ ಮೈಸೂರು ಜಿಲ್ಲೆಯ ಕೂರ್ಗಳ್ಳಿಯ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರದಿಂದ ಅಂಜನಿ ಹುಲಿಯನ್ನು ಶಿವಮೊಗ್ಗ ಮೃಗಾಲಯಕ್ಕೆ ತರಲಾಗಿತ್ತು. ಈ ಹುಲಿಯ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ 4 ಹೆಣ್ಣು ...
Read More »Tag Archives: Death news
ಹಿರಿಯ ಸಾಹಿತಿ ನಾ.ಡಿಸೋಜ ನಿಧನ : ಬೇಳೂರು ಸಂತಾಪ
ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು,ಮಂಗಳೂರಿನ ಫಾಧರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು ಸಂಜೆ 7.30ಕ್ಕೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ನವೀನ್, ಸಾಮಾಜಿಕ ಜಾಲತಾಣ ಹಾಗೂ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಜತೆಗೆ ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು ಕೂಡ ಆಗಿದ್ದರು. ಸೋಮವಾರ ಪೂರ್ತಿ ದಿನ ಸಾಹಿತಿ ನಾ.ಡಿಸೋಜ ...
Read More »ಕಾರು – ಬಸ್ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು
ಶಿವಮೊಗ್ಗ: ಬಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದ್ದು, ಮೃತರ ವಿವರ ...
Read More »ತುಂಗಾ ಚಾನಲ್ ನಲ್ಲಿ ಈಜಲು ಹೋಗಿದ್ದ ಬಾಲಕ ಸಾವು
ಶಿವಮೊಗ್ಗ: ಕಲ್ಲೂರು ಮಂಡ್ಲಿ ಸಮೀಪದ ಬಂಡೆ ಕಲ್ಲೂರು ತುಂಗಾ ಚಾನಲ್ ನಲ್ಲಿ ಈಜಲು ಹೋದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹಳೇ ಮಂಡ್ಲೀ ನಿವಾಸಿ ಮೋಹಿತ್(15) ಮೃತ ಬಾಲಕ. ಬುಧವಾರ ಸ್ನೇಹಿತರೊಂದಿಗೆ ಈಜಲು ಹೋದಾಗ ಚಾನಲ್ ನಲ್ಲಿ ಮೋಹಿತ್ ನಾಪತ್ತೆಯಾಗಿದ್ದ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು. ಬುಧವಾರ ಸಂಜೆಯಿಂದ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಸಂಜೆ ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆಯಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
C News TV Kannada News Online in cnewstv