Tag Archives: Lady murder

ಗಂಡನಿಂದ ಭೀಕರವಾಗಿ ಹೆಂಡತಿ ಕೊಲೆ: ಆರೋಪಿ ಅಂದರ್

ಶಿವಮೊಗ್ಗ: ಪತಿಯಿಂದಲೇ ಪತ್ನಿ ಭೀಕರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನಗರದ ವಾದಿ-ಎ-ಹುದಾದ 5 ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ರುಕ್ಸಾನ(38) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಎಸಿ ಮೆಕ್ಯಾನಿಕ್ ಯೂಸಫ್ ಹಾಗೂ ಆತನ ಪತ್ನಿ ರುಕ್ಸಾನ ನಡುವೆ ಗಲಾಟೆಯಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ. ಕೌಟುಂಬಿಕ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆ ಆರೋಪಿ ಯೂಸಫ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಆರಂಭಿಸಿದ್ದಾರೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »