Breaking News

Tag Archives: police

ತಾಳಗುಪ್ಪದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಸಾವು.

ಶಿವಮೊಗ್ಗ: ಸೈಕಲ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಸೈಕಲ್ ಸವಾರ ಅಣ್ಣಪ್ಪ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ- 206 ರಲ್ಲಿ ತಾಳಗುಪ್ಪದ ಬಳಿ ನಡೆದ ಘಟನೆ ನಡೆದಿದ್ದು, ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.

Read More »

ಶಿವಮೊಗ್ಗದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್.

ಶಿವಮೊಗ್ಗ: ಕರೋನಾ ವಿರುದ್ಧ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದೆ. ಶಿವಮೊಗ್ಗದ ತುಂಗಾನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ತಲಾ 50 ಸಿಬ್ಬಂದಿಯನ್ನು ಇದಕ್ಕಾಗಿ ಆಯ್ಕೆ ಸಹ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಪ್ರಾಥಮಿಕ ಆರೋಗ್ಯ ...

Read More »

ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆ

ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ...

Read More »