Breaking News

Tag Archives: Protest

ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ

ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ...

Read More »

ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.

ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...

Read More »

ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ.  ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...

Read More »