Breaking News

Tag Archives: Shikaripura

ಅಂಜನಾಪುರ ಜಲಾಶಯ ಭರ್ತಿ

Cnewstv.in / 04.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ತೀರ್ಥಹಳ್ಳಿ, ರಿಪ್ಪನ್ ಪೇಟೆ, ಹುಂಚ ಭಾಗಗಳಲ್ಲಿ ಮಳೆಯಾಗುತ್ತಿರುವುದರಿಂದ ಅಂಜನಾಪುರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಸಾಮಾನ್ಯವಾಗಿ ಭರ್ತಿ ಆಗುತ್ತಿತ್ತು ಆದರೆ ಈ ಬಾರಿ ವಾಡಿಕೆಗಿಂತಲು ಮೊದಲೇ ಜಲಾಶಯ ಭರ್ತಿಯಾಗಿದೆ. ಅಂಜನಾಪುರ ಜಲಾಶಯವು 1.92 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಶಿಕಾರಿಪುರ ಶಿರಾಳಕೊಪ್ಪಕ್ಕೆ ಇಲ್ಲಿಂದಲೇ ಕುಡಿಯುವ ...

Read More »

ಗಾಂಜಾ ಮಾರಾಟ ಮಾಡುತ್ತಿದ್ದ 4 ಜನ ಆರೋಪಿಗಳ ಬಂಧನ.

  ಶಿಕಾರಿಪುರ : ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್ (22) ದಾದಾಪೀರ್ (22) ರಿಜ್ವನ್ (23) ಆರೋಪಿಗಳಿಂದ 400 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಮಾರಾಟ ಮಾಡಿ ಗಳಿಸಿದ 650 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ NDPS ಕಾಯ್ದೆ ರೀತ್ಯ ಪ್ರಕರಣವನ್ನು ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮಾದಕ ವಸ್ತು ಗಾಂಜಾ ...

Read More »

ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.

ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...

Read More »

ಏಳು ತಿಂಗಳ ಬಳಿಕ ತವರಿಗೆ ಆಗಮಿಸಿದ ಸಿ.ಎಂ

ಶಿವಮೊಗ್ಗ: ಬರೋಬ್ಬರಿ ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತನ್ನ ತವರು ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಶಿಕಾರಿಪುರಕ್ಕೆ ಸಿಎಂ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿದೆ. ಕೂಡಲೇ ಮಳೆ ನಿಂತು ಪ್ರವಾಹ ತಗ್ಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕೊಡುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ‌. ಸಂತ್ರಸ್ತರ ನೆರವಿಗೆ ಶಕ್ತಿಮೀರಿ ಕೆಲಸ ಮಾಡುತ್ತೇವೆ ಎಂದು ...

Read More »

ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಗೆಲುವು: ಯಡಿಯೂರಪ್ಪ

ಶಿವಮೊಗ್ಗ: ಶಿರಾ ಹಾಗೂ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಗೆ ಉತ್ತಮ ವಾತಾವರಣವಿದೆ. ಮತದಾರರು ಬಿಜೆಪಿ ಪರವಾಗಿದ್ದಾರೆ‌. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಠೇವಣಿಯನ್ನು ಪಡೆಯಲು ಸಾಧ್ಯವಿಲ್ಲ ಎಂದುಕೊಂಡಿದ್ದೆವು. ಆದರೆ ಇದೀಗ ಶಿರಾ ಕ್ಷೇತ್ರದಲ್ಲಿಯೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ‌. ಕಳೆದ ಮೂರು ದಿನದಿಂದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

Read More »

ಲಂಚ ಸ್ವೀಕರಿಸುವಾಗ ಗ್ರಾಮ‌ ಪಂಚಾಯತ್ ಕಾರ್ಯದರ್ಶಿ ಎಸಿಬಿ‌ ಬಲೆಗೆ.

  ಶಿಕಾರಿಪುರ : ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಪಂಚಾಯತ್ ನ ಕಾರ್ಯದರ್ಶಿ ಶಿವಪ್ಪ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದಿದ್ದಾರೆ. ಇಂದು ಮಾಧ್ಯಹ್ನ ಗ್ರಾಮ ಪಂಚಾಯತಿ ಕಛೇರಿಯಲ್ಲಿ NREG ಕೆಲಸದ 2,10,000 ಹಣವನ್ನು ಬಿಡುಗಡೆ ಮಾಡುವ ವಿಚಾರವಾಗಿ ಮಂಜುನಾಥ ಎಂಬುವರ ಬಳಿ 8,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ನೇರವಾಗಿ ಎಸಿಬಿ ಡಿವೈಎಸ್ ಪಿ ಲೋಕೇಶ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Read More »

ಅನರ್ಹರಿಗೆ ಟಿಕೆಟ್ ಖಚಿತ

ಶಿವಮೊಗ್ಗ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶಿಕಾರಿಪುರದಲ್ಲಿ ಈ ಕುರಿತು ಹೇಳಿಕೆ ನೀಡಿರುವ ಸಿಎಂ ಈ ಕುರಿತು ಅಮಿತ್ ಷಾ ಸೇರಿದಂತೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದೇನೆ. ಇದಕ್ಕೆ ವರಿಷ್ಟರೂ ಒಪ್ಪಿಗೆ ಸೂಚಿಸಿದ್ದಾರೆ. ಅನರ್ಹ ಶಾಸಕರನ್ನು ಗೆಲ್ಲಿಸಬೇಕಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರು‌ ಸೇರಿದಂತೆ ಎಲ್ಲ ನಾಯಕರ ಮೇಲಿದೆ. ಇದಕ್ಕಾಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಇಬ್ಬಿಬ್ಬರು ಉಸ್ತುವಾರಿಗಳನ್ನು ಈಗಾಗಲೇ‌ ನೇಮಿಸಲಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಸಂಬಂಧ ...

Read More »

ಸೈನಿಕರಿಗೊಂದು ಸಲಾಂ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಯುವಕರ ಪಡೆಯೊಂದು ತನ್ನ ದೇಶಾಭಿಮಾನವನ್ನು ದಿಲ್ ಹೈ ಇಂಡಿಯಾ ಎಂಬ ಗೀತೆಯ ಮೂಲಕ ಪ್ರಸ್ತುತಪಡಿಸಿದೆ.   ಶಿಕಾರಿಪುರ ತಾಲೂಕಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಗಳನ್ನ ನೀಡುವುದರ ಮೂಲಕ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಗೀತೆಯು ಪ್ರೇಮ್ ಸಾಯಿ ಅವರ ಕಂಠದಲ್ಲಿ  ಮೂಡಿಬಂದಿದೆ.  ಎಲ್ಲಾ ದೇಶ ಅಭಿಮಾನಿಗಳಿಗಾಗಿ  ಈ ಹಾಡನ್ನ ಅರ್ಪಿಸುವುದಾಗಿ ತಂಡದವರು ಸಂತಸದಿಂದ ತಿಳಿಸಿದ್ದಾರೆ.

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments