ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನ ನಿಷೇಧಿಸಿ, ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಲಾಗಿದೆ. ಏ.06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ. 10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.06 ಮತ್ತು 10 ರಂದು ಎರಡು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ...
Read More »Tag Archives: Shimoga
ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳು ಹೆಚ್ಚಾಗಿದ್ದು, ಮೂರು ದಿನಗಳಲ್ಲಿ ಅವುಗಳನ್ನು ಖಾಲಿ ಮಾಡುವಂತೆ ಹಂದಿ ಮಾಲೀಕರಿಗೆ ಮಹಾನಗರ ಪಾಲಿಕೆ ಎಚ್ಚರಿಕೆಯ ಕರೆ ನೀಡಿದೆ. ಶಿವಮೊಗ್ಗ ನಗರದಲ್ಲಿ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ಹಂದಿ ಸಾಕಾಣಿಕೆ ಮಾಲೀಕರ ವಿರುದ್ಧ ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರು ನೀಡಿದ್ದಾರೆ. ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪಾಲಿಕೆಯು ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ...
Read More »ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ತ್ಯಾವರೆಕೊಪ್ಪ ಮೃಗಾಲಯದ ಗಂಡು ಹುಲಿ ‘ವಿಜಯ್’ ಸಾವು
ಶಿವಮೊಗ್ಗ: ನಗರ ಹೊರವಲಯದ ತ್ಯಾವರೆಕೊಪ್ಪ ಮೃಗಾಲಯದಲ್ಲಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಸಾವನ್ನಪ್ಪಿದೆ. ವಯೋಸಹಜವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹುಲಿ ವಿಜಯ್ ನಿನ್ನೆ ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ಸ್ನಾಯು ನೋವಿನಿಂದಾಗಿ ಆಹಾರವನ್ನು ತ್ಯಜಿಸಿತ್ತು. ಕಳೆದ ಒಂದು ತಿಂಗಳಿಂದ ಯಾವುದೇ ಚಟುವಟಿಕೆಯಿಲ್ಲದೇ ಇದ್ದ ಹುಲಿಯನ್ನ ಸಫಾರಿಯ ಹುಲಿ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಆದರೇ, ಚಿಕಿತ್ಸೆ ಫಲಿಸದೇ ನಿನ್ನೆ ಹುಲಿ ವಿಜಯ್ ಮೃತಪಟ್ಟಿದ್ದು, ಮೃಗಾಲಯ ನಿಯಮಾವಳಿಯಂತೆ ಅಂತ್ಯಸಂಸ್ಕಾರವನ್ನ ನೆರವೇರಿಸಲಾಗಿದೆ. ಇನ್ನು ಹುಲಿ ವಿಜಯ್ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗಂಡು ಹುಲಿಗಳೇ ಇಲ್ಲದಂತಾಗಿದ್ದು, ...
Read More »ಶರಣಾದ ಇಬ್ಬರು ನಕ್ಸಲರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು.
ಶಿವಮೊಗ್ಗ: ಇತ್ತೀಚೆಗೆ ಶರಣಾದ 6 ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ...
Read More »ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಭಿನಂದನೆ.
ಶಿವಮೊಗ್ಗ, 72ನೇ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ .ಎಂ.ಕೆ ರವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯಾಗಿರುವ ಅನ್ನಪೂರ್ಣ ಇತ್ತೀಚಿಗೆ ನಡೆದ ಪರೇಡ್ ನಲ್ಲಿ ಭಾಗಿವಹಿಸಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಎನ್ಎಸ್ಎಸ್ ಘಟಕ ಹಾಗೂ ಸ್ಪಂದನಾ ಮಹಿಳಾ ಸಬಲೀಕರಣ ಘಟಕದಿಂದ ಸನ್ಮಾನಿಸಿ, ಗೌರವಿಸಲಾಗಿದೆ. ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಂ.ಸುರೇಶ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಫ್ರೊ.ಕೆ.ಎಂ.ನಾಗರಾಜು, ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
Read More »ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...
Read More »ರೌಡಿ ಶೀಟರ್ ಗೋವಿಂದ ಕೊಲೆ ಆರೋಪಿಗಳ ಬಂಧನ
ರೌಡಿ ಶೀಟರ್ ಗೋವಿಂದ ಕೊಲೆ ಆರೋಪಿಗಳ ಬಂಧನ ಶಿವಮೊಗ್ಗ: ಇಲ್ಲಿನ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ರೌಡಿ ಶೀಟರ್ ಮಾರ್ಕೆಟ್ ಗೋವಿಂದನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜನವರಿ 30 ರಂದು ಮಾರ್ಕೆಟ್ ಗೋವಿಂದನನ್ನು ರೌಡಿ ಶೀಟರ್ ಖರಾಬ್ ಶಿವು ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿ ಬಳಿಕ ತಲೆ ಮರೆಸಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಪೇಟೆ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಪ್ರಕರಣ ನಡೆದು ನಾಲ್ಕು ತಿಂಗಳ ಬಳಿಕ ...
Read More »ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ
ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ...
Read More »ಮಲೆನಾಡಲ್ಲೇ ಮಳೆ ಕ್ಷೀಣ
ಶಿವಮೊಗ್ಗ ಎಂದಾಕ್ಷಣ ಎಲ್ಲರಿಗೂ ಮಲೆನಾಡಿನ ಹೆಬ್ಬಾಗಿಲು ಎಂದು ತಿಳಿದುಕೊಳ್ಳುತ್ತಾರೆ. ಇಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುತ್ತದೆ. ಮಳೆಗಾಲದಲ್ಲಂತೂ ಕುಂಭದ್ರೋಣ ಮಳೆ ಸುರಿಯುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಜೊತೆಗೆ ಕಾಲಕಾಲಕ್ಕೆ ಆಗಬೇಕಾದ ಮಳೆಯೂ ವಾಡಿಕೆಯಷ್ಟು ಆಗುತ್ತಿಲ್ಲ. ಬಾರಿಯ ಮುಂಗಾರು ಪೂರ್ವ ಮಳೆಯನ್ನೇ ಪರಿಗಣನೆಗೆ ತೆಗೆದುಕೊಂಡರೆ ಬರೋಬ್ಬರಿ ಶೇಕಡಾ 77 ರಷ್ಟು ಮಳೆ ಕೊರತೆ ಶಿವಮೊಗ್ಗ ಜಿಲ್ಲೆಯಲಾಗಿದೆ. ಮುಂಗಾರು ಪೂರ್ವದಲ್ಲಿ ವಾಡಿಕೆಯಷ್ಟು ಮಳೆಯಾಗದೇ ಇರುವುದರಿಂದಾಗಿ ರೈತರು ತಲೆ ಮೇಲೆ ಕೈಹೊತ್ತು ಕೂರಬೇಕಾಗ ದುಸ್ಥಿತಿ ಬಂದೊದಗಿದೆ. ...
Read More »
C News TV Kannada News Online in cnewstv