ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »Tag Archives: Shivamogga
ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳು ಹೆಚ್ಚಾಗಿದ್ದು, ಮೂರು ದಿನಗಳಲ್ಲಿ ಅವುಗಳನ್ನು ಖಾಲಿ ಮಾಡುವಂತೆ ಹಂದಿ ಮಾಲೀಕರಿಗೆ ಮಹಾನಗರ ಪಾಲಿಕೆ ಎಚ್ಚರಿಕೆಯ ಕರೆ ನೀಡಿದೆ. ಶಿವಮೊಗ್ಗ ನಗರದಲ್ಲಿ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ಹಂದಿ ಸಾಕಾಣಿಕೆ ಮಾಲೀಕರ ವಿರುದ್ಧ ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರು ನೀಡಿದ್ದಾರೆ. ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪಾಲಿಕೆಯು ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ...
Read More »ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ
ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ...
Read More »ಶಿವಮೊಗ್ಗದಲ್ಲಿ ಸಂಭ್ರಮದಿಂದ ರಂಜಾನ್ ಆಚರಣೆ: ವ್ಯಾಪಕ ಬಂದೋಬಸ್ತ್
ಶಿವಮೊಗ್ಗ : ಶಾಂತಿ ಮತ್ತು ಸೌಹಾರ್ದತೆ ಸಾರುವ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮೂದಾಯದವರು ಇಂದು ಶಿವಮೊಗ್ಗ ನಗರ ಸೇರಿದಂತೆ ರಾಜ್ಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ಶಿವಮೊಗ್ಗ ಡಿಸಿ ಕಚೇರಿ ಸಮೀಪದ ಈದ್ಗಾ ಮೈದಾನ, ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಯ ಮೈದಾನ ಸೇರಿದಂತೆ ಹಲವೆಡೆ ರಂಜಾನ್ ಹಿನ್ನೆಲೆ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆಯಿಂದಲೇ ಮುಸ್ಲಿಂ ಬಾಂಧವರು ಹೊಸಬಟ್ಟೆ ಉಟ್ಟು ಮಕ್ಕಳು ಸಹಿತ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮುಸ್ಲಿಂ ಧರ್ಮ ಗುರುಗಳು ರಂಜಾನ್ ಹಬ್ಬದ ಮಹತ್ವದ ಬಗ್ಗೆ ...
Read More »ಯತ್ನಾಳ್ ಉಚ್ಚಾಟನೆ – ತಡವಾದ್ರೂ ಸರಿಯಾದ ಕ್ರಮ ಎಂದ ಶಾಸಕ ಚೆನ್ನಿ
ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...
Read More »ತ್ಯಾವರೆಕೊಪ್ಪ ಮೃಗಾಲಯದ ಗಂಡು ಹುಲಿ ‘ವಿಜಯ್’ ಸಾವು
ಶಿವಮೊಗ್ಗ: ನಗರ ಹೊರವಲಯದ ತ್ಯಾವರೆಕೊಪ್ಪ ಮೃಗಾಲಯದಲ್ಲಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಸಾವನ್ನಪ್ಪಿದೆ. ವಯೋಸಹಜವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹುಲಿ ವಿಜಯ್ ನಿನ್ನೆ ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ಸ್ನಾಯು ನೋವಿನಿಂದಾಗಿ ಆಹಾರವನ್ನು ತ್ಯಜಿಸಿತ್ತು. ಕಳೆದ ಒಂದು ತಿಂಗಳಿಂದ ಯಾವುದೇ ಚಟುವಟಿಕೆಯಿಲ್ಲದೇ ಇದ್ದ ಹುಲಿಯನ್ನ ಸಫಾರಿಯ ಹುಲಿ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಆದರೇ, ಚಿಕಿತ್ಸೆ ಫಲಿಸದೇ ನಿನ್ನೆ ಹುಲಿ ವಿಜಯ್ ಮೃತಪಟ್ಟಿದ್ದು, ಮೃಗಾಲಯ ನಿಯಮಾವಳಿಯಂತೆ ಅಂತ್ಯಸಂಸ್ಕಾರವನ್ನ ನೆರವೇರಿಸಲಾಗಿದೆ. ಇನ್ನು ಹುಲಿ ವಿಜಯ್ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗಂಡು ಹುಲಿಗಳೇ ಇಲ್ಲದಂತಾಗಿದ್ದು, ...
Read More »ತುಂಗಾ ಜಲಾಶಯದ ಹಿನ್ನೀರಿನಲ್ಲಿ ಮೂರು ಶವ ಪತ್ತೆ
ಶಿವಮೊಗ್ಗ: ತಾಲೂಕಿನ ಗಾಜನೂರಿನ ತುಂಗಾ ಜಲಾಶಯದ ಹಿನ್ನೀರಿನಲ್ಲಿ ಮೂವರ ಶವ ಪತ್ತೆಯಾಗಿವೆ. ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಶರಣಾದ ಇಬ್ಬರು ನಕ್ಸಲರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು.
ಶಿವಮೊಗ್ಗ: ಇತ್ತೀಚೆಗೆ ಶರಣಾದ 6 ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ...
Read More »ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಫೆ 06 ಮತ್ತು 07 ರಂದು ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಆಯೋಜಿಸಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ, ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಸಾಹಿತಿ ಡಾ ಜೆ.ಕೆ.ರಮೇಶ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದ ಮಹಾವೇದಿಕೆಗೆ ಡಾ.ನಾ.ಡಿಸೋಜ ಅವರ ಹೆಸರು ಇಡಲಾಗಿದೆ. ಸುಮಾರು 4 ಸಾವಿರ ಪ್ರತಿನಿಧಿಗಳು ಸಾಹಿತ್ಯ ಸಮ್ಮೇಳನಕ್ಕೆ ನೊಂದಣಿಯಾಗಿದ್ದು, ಎರಡು ದಿನಗಳ ಊಟೋಪಚಾರದ ಜೊತೆಗೆ ಓಓಡಿ ಸೌಲಭ್ಯ ನೀಡಲಾಗುತ್ತಿದೆ ಎಂದರು. ...
Read More »
C News TV Kannada News Online in cnewstv