ಶಿವಮೊಗ್ಗ : ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು. ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್ಸೈಟ್ ಮೂಲಕ ಅಥವಾ ಸಮೀಪದ ಸಿಎಸ್ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ...
Read More »Tag Archives: Shivamogga
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ
ಶಿವಮೊಗ್ಗ : ಎಸ್ಎಸ್ಎಲ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಚಿವ ಕೆ.ಎಸ್.ಈಶ್ವರಪ್ಪ ಪರಿಶೀಲನೆ ನಡೆಸಿದರು. ಕಸೂರ್ಬಾ ಬಾಲಕಿಯರ ಪ್ರೌಢಶಾಲೆ ಮತ್ತು ಮೈನ್ ಮಿಡ್ಲ್ ಸ್ಕೂಲ್ಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು. ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಹಜವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯಲ್ಲಿ 24904 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 84 ಪರೀಕ್ಷಾ ಕೇಂದ್ರಗಳಿವೆ. ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿವಿಧ ರೂಟ್ಗಳಲ್ಲಿ 198 ...
Read More »ಇಂದು ಶಿವಮೊಗ್ಗದಲ್ಲಿ ಹತ್ತು ಕರೋನಾ ಪ್ರಕರಣ ಪತ್ತೆ, ಸ್ವಾಮೀಜಿಗೂ ಬಿಡದೆ ಕಾಡಿದ ಕರೋನಾ.
ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮಠದ ಸ್ವಾಮೀಜಿ ಸೇರಿದಂತೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದಿದ್ದ ಎಂಟು ಜನರಲ್ಲಿ ಕಿಲ್ಲರ್ ಕರೋನಾ ವೈರಸ್ ಕಾಣಿಸಿಕೊಂಡಿದೆ. ಇದಲ್ಲದೆ ಇನ್ನೋರ್ವ ವ್ಯಕ್ತಿಯಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರು ತೀವ್ರ ಉಸಿರಾಟದ ತೊಂದರೆ(SARI) ಅನುಭವಿಸುತ್ತಿದ್ದಾರೆ. 25 ವರ್ಷದ ಮಹಿಳೆಯಲ್ಲಿಯೂ ಕರೋನಾ ಕಾಣಿಸಿಕೊಂಡಿದ್ದು, ಇವರಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂದು ಜಿಲ್ಲಾಡಳಿತ ಪತ್ತೆಹಚ್ಚಲಾರಂಭಿಸಿದೆ. ಸ್ವಾಮೀಜಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂಬುದು ಜಿಲ್ಲಾಡಳಿತಕ್ಕೆ ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ. ಇಂದು ಕರೋನಾ ಸೋಂಕಿಗೆ ತುತ್ತಾದ ...
Read More »ಚರಂಡಿ ಹೂಳು ತೆಗೆಯುವ ಕಾರ್ಯ ಬೇಗನೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲಾ ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ಸ್ವಚ್ಛತಾ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಳೆಗಾಲದ ಪೂರ್ವಸಿದ್ಧತೆ ಪರೀಶೀಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಸೂಚನೆಗಳನ್ನು ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಚರಂಡಿ ತುಂಬಿ ಯಾವುದೇ ಕಾರಣಕ್ಕೂ ನೀರು ಹೊರಗೆ ಹರಿಯುವ ಪರಿಸ್ಥಿತಿ ಎಲ್ಲಿಯೂ ಕಾಣಿಸಬಾರದು. ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಕೃತಕ ನೆರೆ ಸೃಷ್ಟಿಯಾದರೆ ಸಂಬಂಧಪಟ್ಟ ...
Read More »ಜೂನ್ 1ರಿಂದ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ-ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂನ್ 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶುಕ್ರವಾರ ಶಿವಮೊಗ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಧ್ಯ ಕೇವಲ ಒಂದು ರೈಲು ಮಾತ್ರ ಸೇವೆ ಆರಂಭಿಸಲಿದೆ. ಜೂನ್ 1ರಂದು ಸಂಜೆ 5.30ಕ್ಕೆ ಬೆಂಗಳೂರಿನಿಂದ ಹಾಗೂ ಜೂನ್ 2ರಂದು ಬೆಳಿಗ್ಗೆ 5.30ಕ್ಕೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ಕೇವಲ ಆನ್ಲೈನ್ನಲ್ಲಿ ಮಾತ್ರ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶವಿದೆ. ...
Read More »ಜಿಲ್ಲೆಯಲ್ಲಿ ಮತ್ತೆ 10 ಕರೋನಾ ಪ್ರಕರಣಗಳು. ಸೊಂಕಿತರ ಸಂಖ್ಯೆ 24 ಕ್ಕೆ ಏರಿಕೆ.
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಮತ್ತೆ 10 ಕರೋನಾ ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 26ಕ್ಕೇರಿದೆ. ಬಾಂಬೆ, ತಮಿಳುನಾಡು ಹಾಗೂ ಕೇರಳದಿಂದ ಬಂದವರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ 10 ಜನರಲ್ಲಿ ಕರೋನಾ ದೃಢಪಟ್ಟಿದ್ದು, ಇನ್ನೂ 143 ಜನರ ವೈದ್ಯಕೀಯ ವರದಿ ಬರಬೇಕಿದೆ. ಅಲ್ಲದೆ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
Read More »ಹೊರ ರಾಜ್ಯಗಳಿಂದ ಆಗಮಿಸಿದ್ದ 1428 ಮಂದಿಗೆ ಸಾಂಸ್ಥಿಕ ಕ್ವಾರೆಂಟೈನ್:ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಬೇರೆ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೆ ಆಗಮಿಸಿರುವ 1428ಮಂದಿಯನ್ನು ಸಾಂಸ್ಥಿಕ ಕ್ವಾರೆಂಟೈನ್ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ ಪೈಕಿ 802 ಮಂದಿಯ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದ್ದು, 14ಪಾಸಿಟಿವ್ ಬಂದಿವೆ. ಇನ್ನುಳಿದವರ ಪರೀಕ್ಷೆಯನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಇದುವರೆಗೆ ಒಟ್ಟು 4554 ಸ್ಯಾಂಪಲ್ಗಳ ಪರೀಕ್ಷೆ ನಡೆಸಲಾಗಿದ್ದು, 4349 ವರದಿ ಬಂದಿವೆ. ಇನ್ನೂ 191 ಸ್ಯಾಂಪಲ್ಗಳ ವರದಿ ಬರಬೇಕಿದೆ ಎಂದು ಹೇಳಿದರು. ಕ್ವಾರೆಂಟೈನ್ ವ್ಯವಸ್ಥೆ: ಪ್ರಸ್ತುತ 916ಮಂದಿ ಸಾಂಸ್ಥಿಕ ಕ್ವಾರೆಂಟೈನ್ ...
Read More »ಬಸ್, ರೈಲು ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಕರೋನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ...
Read More »ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.
ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.. https://youtu.be/7FHDhDVPZJY
Read More »ಮಂತ್ರ ಎಜುಕೇಷನ್ ಎಕ್ಸ್ ಫೋ- 2020
ನಮ್ಮ ಮಗುವಿಗೆ ಯಾವ ಶಾಲೆ ಒಳ್ಳೆಯದು, ಯಾವ ಶಾಲೆಯಲ್ಲಿ ಏನು ಸೌಲಭ್ಯವಿದೆ, ಫೀ ಎಷ್ಟು, ಊಟ ಇರತ್ತಾ, ಬಸ್ ಇರತ್ತಾ ಇಂಥ ಹತ್ತಾರು ವಿಷಯಗಳು ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರನ್ನು ಕಾಡುವ ಪ್ರಶ್ನೆಗಳು. ಈ ಎಲ್ಲಾ ಪ್ರಶ್ನೆಗಳಿಗೆ `ಮಂತ್ರ ಎಜುಕೇಷನ್ ಎಕ್ಸ್ ಫೋ- 2020’ಪರಿಹಾರ ದೊರಕಿಸುತ್ತಿದೆ. ರಾಜ್ಯದ ಪ್ರಮುಖ ಇವೆಂಟ್ ಮ್ಯಾನೆಜ್ಮೆಂಟ್ ಸಂಸ್ಥೆಯಾದ `ಮಂತ್ರ ಇವೆಂಟ್ಸ್’ ನಿಂದ ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಎಜುಕೇಷನ್ ಎಕ್ಸ್ ಫೋ- 2020 ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲೆಗಳ ನಡುವೆ ಸಂಪರ್ಕ ಕಲ್ಪಿಸುವ ಈ ವಿಭಿನ್ನವಾದ ಕಾರ್ಯಕ್ರಮ ...
Read More »
C News TV Kannada News Online in cnewstv