Breaking News

Tag Archives: Thunganagara police station

ಒಂದು ನಾಯಿಯ ಕಥೆ

ಶಿವಮೊಗ್ಗ: ಇದು ಅಂತಿಂಥ ನಾಯಿಯಲ್ಲ. ಮಾಲೀಕರಿಂದ ತಪ್ಪಿಸಿಕೊಂಡ ಈ ನಾಯಿ ಇದೀಗ ಪೊಲೀಸರ ವಶದಲ್ಲಿದೆ. ಈ ನಾಯಿ ಪೊಲೀಸರ ವಶಕ್ಕೆ ಬಂದ ಕಥೆಯೇ ಒಂದು ರೋಚಕ. ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಮಾಲೀಕರಿಂದ ತಪ್ಪಿಸಿಕೊಂಡಿದ್ದ ದಷ್ಟಪುಷ್ಟವಾಗಿದ್ದ ಲ್ಯಾಬ್ರಡಾರ್ ನಾಯಿ ಕಾಣಿಸಿಕೊಂಡಿದೆ. ಯಾರೋ ಸಾಕಿದ ನಾಯಿ ಎಂಬುದನ್ನು ಅರಿತ ಮೀನು ವ್ಯಾಪಾರಿಯೊಬ್ಬರು ನಾಯಿಯನ್ನು ಕರೆದುಕೊಂಡು ತನ್ನ ಮನೆಗೆ ಬಂದಿದ್ದಾರೆ. ನಾಯಿಯ ಮಾಲೀಕರು ಬರಬಹುದೇನೋ ಎಂದು ಕಾದಿದ್ದಾರೆ. ಆದರೆ ನಾಯಿಯ ಮಾಲೀಕರು ಬರಲೇ ಇಲ್ಲ. ಅಷ್ಟರಲ್ಲಾಗಲೇ ಸಂಜೆಯಾಗಿದ್ದು, ನಾಯಿ ಕೂಗಾಡಲಾರಂಭಿಸಿದೆ‌. ಆಗ ಏನು ಮಾಡಬೇಕೆಂದು ದಿಕ್ಕುತೋಚದ ಮೀನು ವ್ಯಾಪಾರಿ ತುಂಗಾ ...

Read More »

ಮರಕ್ಕೆ ಕಾರ್ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು.

ಶಿವಮೊಗ್ಗ : ಶಿವಮೊಗ್ಗ ದಿಂದ N R ಪುರಕ್ಕೆ ತೆರಳುತ್ತಿದ್ದ ಸೆಲೆರಿಯೋ ಕಾರು ಕಾಚಿನಕಟ್ಟೆಯ ಬಳಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರನ್ನ ಕಟ್ ಮಾಡುವ ಮೂಲಕ ಕಾರಿನಲ್ಲಿದ್ದ ಜನರನ್ನು ಹೊರಗೆ ತೆಗೆಯಲಾಯಿತು. ಇವರನ್ನೆಲ್ಲ ಎನ್ಆರ್ ಪುರ ನಿವಾಸಿಗಳು ಎಂದು ಹೇಳಲಾಗಿದೆ. ಆದರೆ ಯಾವುದೇ ನಿಖರವಾದ ಮಾಹಿತಿಗಳು ದೊರೆತಿಲ್ಲ. ತುಂಗಾ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »